ಕೊಪ್ಪಳ ನ್ಯಾಯಾಲಯದಲ್ಲಿ 6 ಹುದ್ದೆಗಳಿಗೆ ಅರ್ಜಿ ಹಾಕಿ

ಕೊಪ್ಪಳ, ಜುಲೈ 22 : ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 31/7/2019 ಕೊನೆಯ ದಿನವಾಗಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಪ್ಪಳ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಬ್ಯಾಕ್‌ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಒಟ್ಟು 6 ಹುದ್ದೆಗಳಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ, ಆಂಗ್ಲ ಭಾಷೆಯ ಹಿರಿಯ ದರ್ಜೆ (senior grade) ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Apply for stenographer post at Koppal court

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ (senior grade) ಶೀಘ್ರಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್‌ನಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಬೆರಳಚ್ಚು ಮಾಡುವ ಜ್ಞಾನವು ಅವಶ್ಯವಾಗಿರುತ್ತದೆ.

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ/2ಬಿ/3ಎ/3ಬಿ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ -1ಕ್ಕೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 200 ರೂ.ಗಳು. ಪ.ಜಾ/ಪ.ಪಂ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಶುಲ್ಕವನ್ನು ಚಲನ್ ಮುಖಾಂತರ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ಪಾವತಿಸಲು 2/8/2019 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+