ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಜೂನ್ 18 : ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16/7/2019 ಕೊನೆಯ ದಿನವಾಗಿದೆ.
ಒಟ್ಟು 11 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಿದ ಬಳಿಕ ಶುಲ್ಕವನ್ನು ಪಾವತಿ ಮಾಡಲು 17/7/2019 ಕೊನೆ ದಿನ.
ಎಸ್.ಎಸ್.ಎಲ್.ಸಿ. ಅಥವ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಶ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಹಿರಿಯ ಶ್ರೇಣಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅಧಿಸೂಚನೆ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ : ಈ ಅಧಿಸೂಚನೆ ಹೊರಡಿಸಿದ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಅರ್ಜಿ ಶುಲ್ಕಗಳು : ಸಾಮಾನ್ಯ ಅರ್ಹತೆ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ., ಪ.ಜಾ/ಪ.ಪಂಡದ ಅಭ್ಯರ್ಥಿಗಳಿಗೆ 100 ರೂ.ಗಳು. ಅರ್ಜಿ ಶುಲ್ಕವನ್ನು ವೆಬ್‌ಸೈಟ್‌ನಲ್ಲಿ ನೀಡಲಾದ ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಪಾವತಿ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications