ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಕೋರ್ಟ್‌ನಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಶಿವಮೊಗ್ಗ, ಜುಲೈ 01; ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 4 ಶೀಘ್ರಲಿಪಿಗಾರರ ಹುದ್ದೆಗಳ ಭರ್ತಿಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

ಅಭರ್ಥಿಗಳು ಆನ್‍ಲೈನ್ ಮೂಲಕ ಜುಲೈ 7 ರಿಂದ 27ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗೆ ಕನಿಷ್ಟ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗೆ 40 ವರ್ಷದ ಗರಿಷ್ಟ ವಯೋಮಿತಿ ನಿಗದಿ ಮಾಡಲಾಗಿದೆ.

ಮುಂದಿನ 3 ತಿಂಗಳಲ್ಲಿ ಶೇ 50ರಷ್ಟು ನೇಮಕಾತಿ ಹೆಚ್ಚಳ! ಮುಂದಿನ 3 ತಿಂಗಳಲ್ಲಿ ಶೇ 50ರಷ್ಟು ನೇಮಕಾತಿ ಹೆಚ್ಚಳ!

ಅರ್ಜಿ ಸಲ್ಲಿಕೆ ಮಾಡುವವರು ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.

ದಾವಣಗೆರೆ; ಬೋಧಕರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ದಾವಣಗೆರೆ; ಬೋಧಕರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Apply For Stenographer Post At Shivamogga Court

ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣಗೊಂಡಿರಬೇಕು ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

 ಬೆಂಗಳೂರಿನ ಐಕಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೆಂಗಳೂರಿನ ಐಕಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ., ಪ್ರವರ್ಗ-2ಎ, 2ಬಿ ಮತ್ತು 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ರೂ.100 ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಅಧಿಸೂಚನೆ, ವಯೋಮಿತಿ ಸಡಿಲಿಕೆ, ಹುದ್ದೆಗಳ ವರ್ಗೀಕರಣ, ಆಯ್ಕೆ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆ, ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಕರ್ನಾಟಕ ಸವಿತಾ ಸಮಾಜ ಅಭಿವೃಧ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಹಾಗೂ ಸಾಲ ಸೌಲಭ್ಯ ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-2 ರಲ್ಲಿ ಬರುವ ಮಡಿವಾಳ ಮತ್ತು ಉಪಜಾತಿಗೆ ಸೇರಿದ 18 ರಿಂದ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಮೂಲ ದಾಖಲಾತಿಗಳೊಂದಿಗೆ ಆಗಷ್ಟ್ 3ರೊಳಗಾಗಿ ಸುವಿಧಾ ತಂತ್ರಾಂಶದ ಮೂಲಕ ಸಲ್ಲಿಸಬೇಕು.

ಈ ಸೌಲಭ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಅಲೆಮಾರಿ ಮತ್ತು ಇದರ ಉಪಜಾತಿಗೆ ಸೇರಿದ ಅರ್ಜಿದಾರರು ವೆಬ್‍ಸೈಟ್ https://kssd.karnataka.gov.in ಭೇಟಿ ನೀಡಬಹುದಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ವೆಬ್‌ಸೈಟ್ ವಿಳಾಸ https://suvidha.karnataka.gov.in

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 0836-2957829 ಅಥವಾ 9606066389 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತರಬೇತಿಗೆ ಅರ್ಜಿ ಆಹ್ವಾನ; ಕಲಬುರಗಿ ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಇದೇ ಜುಲೈ 11 ರಿಂದ 23 ರವರೆಗೆ ಉಚಿತವಾಗಿ 13 ದಿನಗಳ ಕಾಲ ಸಿಸಿಟಿವಿ ಕ್ಯಾಮರಾ, ಸೆಕ್ಯೂರಿಟಿ ಅಲಾರ್ಮ್, ಸ್ಮೋಕ್ ಡಿಟೆಕ್ಟರ್ ಅಳವಡಿಕೆ ಮತ್ತು ಸೇವೆ ಕುರಿತು ತರಬೇತಿ ಆಯೋಜನೆ ಮಾಡಲಾಗಿದೆ. ಆಸಕ್ತರು ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು.

ತರಬೇತಿಯನ್ನು ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 45 ವರ್ಷ.

ಬಿಪಿಎಲ್, ಅಂತ್ಯೋದಯ ರೇಷನ್, ಎಮ್‍ಜಿಎನ್‍ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳ ಜೊತೆ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದವರು ಜುಲೈ 10 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 9243602888, 9886781239 ಹಾಗೂ 9900135705 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Recommended Video

Ind vs Eng T20 ಪಂದ್ಯಗಳಿಗೆ ಎರೆಡೆರಡು ತಂಡಗಳು | *Cricket | OneIndia Kannada

English summary
Apply for stenographer post at Shivamogga district court. Candidates can apply online from July 7 to 27, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X