ಎಸ್‌ಎಸ್‌ಎಲ್‌ಸಿ ಆದವರಿಗೆ ಬೆ.ಗ್ರಾಮಾಂತರ ಕೋರ್ಟ್‌ನಲ್ಲಿ ಕೆಲಸ
Recommended Video

ಬೆಂಗಳೂರು, ಸೆಪ್ಟೆಂಬರ್ 06 : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 25/9/2018 ಕೊನೆ ದಿನ.
ಒಟ್ಟು 20 ಹುದ್ದೆಗಳಿದ್ದು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಂಚೆ ಅಥವ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕನ್ನಡ ಮತ್ತು ಇಂಗ್ಲಿಶ್ ಪ್ರೌಢ ದರ್ಜೆಯ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಇಂಗ್ಲಿಶ್ ಪ್ರೌಢ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಇರಬೇಕು.

ವಯೋಮಿತಿ ವಿವರ : ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2 ಬಿ, 3ಎ, 3ಬಿ 38 ವರ್ಷಗಳು, ಪ.ಜಾ./ಪ.ಪಂ/ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ. ಮತ್ತು ಪ.ಜಾ/ಪ.ಪಂ/ಪ್ರವರ್ಗ -1 ರ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ ಪಾವತಿ ಮಾಡಬೇಕು.
ಅರ್ಜಿ ಸಲ್ಲಿಸಿದ ಬಳಿಕ ಲಭ್ಯವಾಗುವ ಚಲನ್ ಡೌನ್ ಲೋಡ್ ಮಾಡಿಕೊಂಡು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಡಿ.ಡಿ,. ಮನಿ ಆರ್ಡರ್ ಮೂಲಕ ಸಲ್ಲಿಸಿದ ಅರ್ಜಿ ಶುಲ್ಕ ಸ್ವೀಕರಿಸುವುದಿಲ್ಲ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ












Click it and Unblock the Notifications