ಧಾರವಾಡ ಕೋರ್ಟ್‌ನಲ್ಲಿ ಶೀಘ್ರಲಿಪಿಗಾರರ ಹುದ್ದೆ ಖಾಲಿ ಇದೆ

ಬೆಂಗಳೂರು, ಅಕ್ಟೋಬರ್ 08 : ಧಾರವಾಡ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 30/10/2019 ಕೊನೆಯ ದಿನವಾಗಿದೆ.

ಒಟ್ಟು 9 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ ಹಾಗೂ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ ನೇಮಕಾತಿ) ನಿಯಮ 1982 ಮತ್ತು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ ನೇಮಕಾತಿ) (ತಿದ್ದುಪಡಿ) ನಿಯಮ 2007ರ ಅನ್ವಯ ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ.

ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ 2008ರ ಅನ್ವಯ ಆಯ್ಕೆಯಾದ ಶೀಘ್ರಲಿಪಿಗಾರರು ಕರ್ನಾಟಕ ಸರ್ಕಾರ ನಿಗದಿಪಡಿಸುವ ಕಂಪ್ಯೂಟರ ಸಾಕ್ಷರತಾ ಪರೀಕ್ಷೆಯನ್ನು ಶೇ 50 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಡೆದು ನಿಗದಿತ ಅವಧಿಯಲ್ಲಿ ಉತ್ತೀರ್ಣರಾಗಬೇಕು.

Apply For Stenographer Post In Dharwad District Court

ವಿದ್ಯಾರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ 40, ಪ್ರವರ್ಗ 1/2ಎ/2ಬಿ/3ಎ/3ಬಿ 38 ವರ್ಷಗಳು.

ಸರ್ಕಾರಿ ಸೇವೆಯಲ್ಲಿ ಇರುವವರಿಗೆ/ವಿಧವೆ/ಅಂಗವಿಕಲರಿಗೆ/ಮಾಜಿ ಸೈನಿಕರಿಗೆ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಇ-ಮೇಲ್ ಇಡಿ, ಮೊಬೈಲ್ ನಂಬರ್‌ ಅನ್ನು ಕಡ್ಡಾಯವಾಗಿ ನಮೂದಿಸಬೇಕು.

ಹೆಚ್ಚಿನ ವಿವರ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+