ಗದಗದಲ್ಲಿ ಕೆಲಸ; ಎಸ್‌ಎಸ್‌ಎಲ್‌ಸಿ ಆದವರು ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 11 : ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 30 ನವೆಂಬರ್ 2019 ಕೊನೆಯ ದಿನವಾಗಿದೆ.
10 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಆಯ್ಕೆಯಾದವರು ಕರ್ನಾಟಕದ ಗದಗದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿ ಸಲ್ಲಿಸುವವರಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಓಬಿಸಿಯವರಿಗೆ 3, ಎಸ್‌ಸಿ/ಎಸ್‌ಟಿಯವರಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ 27,650 ರಿಂದ 52,650 ರೂ. ಗಳು. ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಸಂದರ್ಶನ ಮತ್ತು ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದವರು ನೆಟ್ ಬ್ಯಾಂಕಿಂಗ್/ಕೆಡಿಟ್/ಡೆಬಿಟ್ ಅಥವ ಜನರಲ್ ಛಲನ್ ಮೂಲಕ ಶುಲ್ಕವನ್ನು ಪಾವತಿ ಮಾಡಲು 30/11/2019 ಕೊನೆಯ ದಿನವಾಗಿದೆ. ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100, ಎಸ್‌ಸಿ/ಎಸ್‌ಟಿ/ನಿವೃತ್ತಿ ಯೋಧರಿಗೆ 50 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ












Click it and Unblock the Notifications