ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಬೆಂಗಳೂರು, ಜನವರಿ 13 : ಹಾವೇರಿ ಜಿಲ್ಲಾ ನ್ಯಾಯಾಲಯ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಕೆ ಮಾಡಲು 10/02/2020 ಕೊನೆಯ ದಿನವಾಗಿದೆ.

ಹಾವೇರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರ ಹುದ್ದೆಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಭರ್ತಿ ಮಾಡಿ, ಸ್ವಯಂ ದೃಢೀಕೃತ ಬೆರಳಚ್ಚು ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕಿದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ; ಅರ್ಜಿ ಹಾಕಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ; ಅರ್ಜಿ ಹಾಕಿ

ಅರ್ಜಿಗಳನ್ನು ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿಯೇ ಸಲ್ಲಿಸಬೇಕು. ಅರ್ಜಿಯನ್ನು ಕಚೇರಿಯಲ್ಲಿ ಮಾರಾಟ ಮಾಡಲಾಗುವುದಿಲ್ಲ. ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು.

UPSC ನೇಮಕಾತಿ: 421 ಅಧಿಕಾರಿ ಹುದ್ದೆಗಳಿವೆ, ಅರ್ಜಿ ಹಾಕಿ UPSC ನೇಮಕಾತಿ: 421 ಅಧಿಕಾರಿ ಹುದ್ದೆಗಳಿವೆ, ಅರ್ಜಿ ಹಾಕಿ

jobs

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಕೊಪ್ಪಳ; 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿ ಕೊಪ್ಪಳ; 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ.

ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಪ್ರೌಢ ಬೆರಳಚ್ಚು ಪರೀಕ್ಷೆ ತೇರ್ಗಡೆ ಹೊಂದಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಗರಿಷ್ಠ ವಯೋಮತಿ ಮೀರಿರಬಾರದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Haveri district court invited applications for the 9 Stenographer post. Eligible and interested candidates can apply before 10th February 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X