ಕೊಡಗು ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ

ಕೊಡಗು, ಫೆಬ್ರವರಿ 09 : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ (stenographer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಮಾರ್ಚ್ 19, 2016.

ಒಟ್ಟು 4 ಹುದ್ದೆಗಳಿದ್ದು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಕೈ ಬರಹದಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿದೆ. [ಕೆಪಿಎಸ್ ಸಿ : RTO ಹುದ್ದೆಯ ನೇಮಕಾತಿ 2016, ವಿವರ]

jobs

ವಿದ್ಯಾರ್ಹತೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಶೀಘ್ರಲಿಪಿ ಹಾಗೂ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 18 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 38, ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ : ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಕೈ ಬರದಹದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು, ಮಡಿಕೇರಿ - 571201 ವಿಳಾಸಕ್ಕೆ ಕಳುಹಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+