ತುಮಕೂರು ನ್ಯಾಯಾಲಯದಲ್ಲಿ 13 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 18 : ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 17/12/2019 ಕೊನೆಯ ದಿನವಾಗಿದೆ.
ಒಟ್ಟು 13 ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂಚೆ ಮೂಲಕ ಅಥವ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ. ನವೆಂಬರ್ 18 ರಿಂದ ಡಿಸೆಂಬರ್ 17ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ ವಿವರ : ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷದ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಸರ್ಕಾರಿ ಸೇವೆಯಲ್ಲಿ ಇರುವವರು, ವಿಧವೆಯರು, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳು 200 ರೂ., ಪ.ಜಾ/ಪ.ಪಂ/ ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications