ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಜೂನ್ 3ರ ತನಕ ಅರ್ಜಿ ಹಾಕಿ
ಕಲಬುರಗಿ, ಮೇ 31; ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ 7 ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಜೂನ್ 3 ಕೊನೆಯ ದಿನವಾಗಿದೆ.
ಸರ್ವೇ ಸುಪ್ರವೈಸರ್, ಸಿಎಡಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿಯಲ್ಲಿ ಕೆಲಸ ಮಾಡಬೇಕಿದೆ.
ಸರ್ವೇ ಸುಪ್ರವೈಸರ್ 1 ಹುದ್ದೆಗಳಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 60,000 ರೂ. ವೇತನ ನಿಗದಿ ಮಾಡಲಾಗಿದೆ. ಸಿಎಡಿ ಆಪರೇಟರ್ 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಗೆ 50,000 ರೂ. ವೇತನ ನೀಡಲಾಗುತ್ತದೆ.

ಸರ್ವೇ ಸುಪ್ರವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಬಿಇ ಸಿವಿಲ್ ಪದವಿ ಪಡೆದಿರಬೇಕು. ಸಿಎಡಿ ಆಪರೇಟರ್ ಹುದ್ದೆಗಳಿಗೆ ಐಐಟಿ ಅಥವ ಡಿಪ್ಲೊಮಾ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಹ ಸಿಗಲಿದೆ.
ಅನುಭವ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ; Project Director, DUDC, Room No 11, 1st Floor, Minividhan Soudh, Main Road Kalaburagi - 585102, Karnataka.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ. kalaburagidudc.mrc.gov.in
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ [email protected] ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ. ದೂರವಾಣಿ ಸಂಖ್ಯೆ 08472-2786204.
ಸ್ವಂತ ಉದ್ಯೋಗಕ್ಕೆ ಸಾಲ ಸೌಲಭ್ಯ; ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತಿ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ ಅಭಿಯಾನದಡಿ ಸ್ವಂತ ಉದ್ಯೋಗದ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಕರೆಯಲಾಗಿದೆ.
ಭಾಗ್ಯನಗರ ಪಟ್ಟಣ ಪಂಚಾಯಿತಿ ಈ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ ಅಭಿಯಾನದಡಿ ಸ್ವಂತ ಉದ್ಯೋಗ ಸಾಲ ಸೌಲಭ್ಯಕ್ಕಾಗಿ 4 ಜನ ಫಲಾನುಭವಿಗಳು ಹಾಗೂ ಸ್ವ-ಸಹಾಯ ಗುಂಪಿನ ರಚನೆ ಮಾಡಲು 9, ಕಾರ್ಯಾಲಯದಿಂದ ಈಗಾಗಲೇ ರಚಿತವಾಗಿರುವ ಗುಂಪುಗಳಿಗೆ ಸಾಲ ಸೌಲಭ್ಯಕ್ಕಾಗಿ ಹಾಗೂ ಬೀದಿ-ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ನೀಡಲು 18 ಗುರಿಯನ್ನು ಹೊಂದಲಾಗಿದೆ.
ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅರ್ಹ ಫಲಾನುಭವಿಗಳು ಚಾಲ್ತಿ ವರ್ಷದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ತಮ್ಮ ವಿದ್ಯಾರ್ಹತೆ ಪ್ರಮಾಣ ಪತ್ರ, ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ, 2 ಫೋಟೋ, ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು ದ್ವಿಪತ್ರಿಯಲ್ಲಿ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಜೂನ್ 15ರ ಒಳಗಾಗಿ ಸಲ್ಲಿಸಬೇಕೆಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಕಲಬುರಗಿ ತರಬೇತಿಗೆ ಅರ್ಜಿ ಆಹ್ವಾನ; ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ 2 ವರ್ಷಗಳ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ನೀಡುತ್ತಿದ್ದು, ಇದಕ್ಕಾಗಿ ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ಅರ್ಜಿ ಸಲ್ಲಿಸಿ ಅದರ ಪ್ರತಿ ಮತ್ತು ಅಗತ್ಯ ದಾಖಲಾತಿಗಳನ್ನು 2022ರ ಜೂನ್ 30 ರೊಳಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಲಬುರಗಿ ಕಚೇರಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಆಯ್ಕೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಮಾಸಿಕ 10 ಸಾವಿರ ರೂ. ತರಬೇತಿ ಭತ್ಯೆಯನ್ನು ನೀಡಲಾಗುತ್ತದೆ. ಅಪೂರ್ಣ ಮತ್ತು ತಡವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಅರ್ಜಿ ಸಲ್ಲಿಕೆ ಮಾಡಲು ವಯೋಮಿತಿ 40 ವರ್ಷ ಮೀರಿರಬಾರದು, ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು ಹಾಗೂ ಬಾರ್ ಕೌನ್ಸಿಲ್‍ನಲ್ಲಿ ನೋಂದಣಿ ಮಾಡಿರಬೇಕು.












Click it and Unblock the Notifications