ಬೆಂಗಳೂರು ಜಲಮಂಡಳಿ ನೇಮಕಾತಿ; ಸರ್ವೇಯರ್ ಹುದ್ದೆ ಭರ್ತಿ

ಬೆಂಗಳೂರು, ಸೆಪ್ಟೆಂಬರ್ 11 : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸರ್ವೇಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 25/9/2020ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

ಬೆಂಗಳೂರು ಜಲಮಂಡಳಿಯಲ್ಲಿನ ಸರ್ವೇಯರ್ ಹುದ್ದೆಗಳಿಗೆ ನಿವೃತ್ತ ನೌಕರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಒಟ್ಟು ಎರಡು ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಸನ್ನದ್ದು ಹೊಂದಿದ ಸರ್ಕಾರಿ ಕಚೇರಿಯಲ್ಲಿ ಸರ್ವೇಯರ್ ಆಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ/ಸ್ವಯಂ ನಿವೃತ್ತಿ ಹೊಂದಿರಬೇಕು. 70 ವರ್ಷಗಳ ವಯಸ್ಸಿನ ಒಳಗಿರಬೇಕು ಮತ್ತು ಆರೋಗ್ಯವಾಗಿ ಸದೃಢರಾಗಿರಬೇಕು.

bwssb

ಮಂಡಳಿ ವಿಧಿಸುವ ಷರತ್ತು ಮತ್ತು ನಿಬಂಧನೆಗಳಿಗೆ ಬದ್ಧರಾಗಿ ಕರ್ತವ್ಯ ನಿರ್ವಹಣೆ ಮಾಡಲು ಇಚ್ಚಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. 25/9/2020ರ ಸಂಜೆ 5 ಗಂಟೆ ತನಕ ಖುದ್ದಾಗಿ ಆಗಮಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವವರು ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ, ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ. ಜಿ. ರಸ್ತೆ, ಬೆಂಗಳೂರು ಇವರಿಗೆ ಖುದ್ದಾಗಿ ಸಲ್ಲಿಸಬೇಕು.

ಈ ಹುದ್ದೆಯ ಕರ್ತವ್ಯ ಮತ್ತು ಜವಾಬ್ದಾರಿ, ಷರತ್ತುಗಳ ಬಗ್ಗೆ ತಿಳಿಯಲು ಕಚೇರಿಗೆ ಕರ್ತವ್ಯದ ವೇಳೆಯಲ್ಲಿ ಹಾಜರಾಗಬೇಕು. ಸಮಯ ಬೆಳಗ್ಗೆ 10 ರಿಂದ ಸಂಜೆ 5.30.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+