ಹಾಸನದಲ್ಲಿ ಕೆಲಸ ಖಾಲಿ ಇದೆ; ಮೇ 30ರೊಳಗೆ ಅರ್ಜಿ ಹಾಕಿ
ಹಾಸನ, ಮೇ 19 : ಹಾಸನ ಜಿಲ್ಲೆಯಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸಲು ತಾಲೂಕು ಸಂಯೋಜಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮೇ 30ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.
Recommended Video
ಕೇಂದ್ರ ಸರ್ಕಾರದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ ಪೋಷಣ್ ಅಭಿಯಾನ ಅನುಷ್ಟಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಬೇಲೂರು, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನಲ್ಲಿ ಕೆಲಸ ಮಾಡಲು ಅಭ್ಯರ್ಥಿಗಳು ಬೇಕಾಗಿದ್ದಾರೆ.
ತಾಲೂಕು ಸಂಯೋಜಕರ ಹುದ್ದೆಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಅಥವಾ ಐಟಿ ಪದವಿ ಅಥವಾ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ಪದವಿ ಪಡೆದಿರಬೇಕು. ಟೆಕ್ನಾಲಜಿ ಅಂಡ್ ಸಾಫ್ಟ್‌ವೇರ್ ಅಪ್ಲಿಕೇಷನ್ ಸಪೋರ್ಟ್‍ನಲ್ಲಿ ಕನಿಷ್ಟ 2 ವರ್ಷಗಳು ಕೆಲಸ ನಿರ್ವಹಿಸಿದ ಅನುಭವ ಇರಬೇಕು.
ಸ್ಥಳೀಯ ಅಭ್ಯರ್ಥಿಯಾಗಿದ್ದು, ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಿದ್ದರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಮೇ. 30ರ 5 ಗಂಟೆಯೊಳಗೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬೇಕು.
ವಿಳಾಸ : ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೆ. ಆರ್. ಪುರ 9ನೇ ಕ್ರಾಸ್, ಹಾಸನ. ಹೆಚ್ಚಿನ ವಿವರಕ್ಕೆ 08172-267218, 235133 ಸಂಖ್ಯೆಗೆ ಕರೆ ಮಾಡಿ.












Click it and Unblock the Notifications