ಕೊಡಗು; ಕೆಲಸ ಖಾಲಿ ಇದೆ, ವೇತನ 30 ಸಾವಿರ ರೂ.ಗಳು

ಮಡಿಕೇರಿ, ನವೆಂಬರ್ 20: ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳಲ್ಲಿ ಖಾಲಿ ಇರುವ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 24 ಕೊನೆಯ ದಿನವಾಗಿದೆ.

ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಎಟಿಎಂಎ) ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

Apply For Taluk Technical Officer Post At Kodagu

ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸೋಮವಾರಪೇಟೆ ತಾಲೂಕು ಹಾಗೂ ವಿರಾಜಪೇಟೆ ತಾಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರಗಳು; ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ಎಂಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ) ಪದವಿ ಉತ್ತೀರ್ಣರಾಗಿರಬೇಕು. ಕನಿಷ್ಟ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಮ್‍ಎಸ್ ಆಫೀಸ್‍ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ ವಯೋಮಿತಿ 45 ವರ್ಷ, ಮಾಸಿಕ ರೂ. 30,000 ಗೌರವ ಧನ ನೀಡಲಾಗುತ್ತದೆ.

ಆಸಕ್ತ, ಅರ್ಹರು ನವೆಂಬರ್ 24ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ (ಆತ್ಮ ವಿಭಾಗ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಷ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಗೆ ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+