ಅಜೀಮ್ ಪ್ರೇಮ್‌ಜಿ ಫೌಂಡೇಶನ್‌ನಲ್ಲಿ ವಿವಿಧ ಹುದ್ದೆ ಭರ್ತಿ
ಬೆಂಗಳೂರು, ಡಿಸೆಂಬರ್ 09 : ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಶಿಕ್ಷಕರ ಪ್ರಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ಶಿಕ್ಷಕರೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಾ ಅವರ ವೃತ್ತಿಪರತೆಯನ್ನು ಅಭಿವೃದ್ಧಿಪಡಿಸುವ ಮೂಲಕ ಉನ್ನತ ಸಾಮರ್ಥ್ಯವುಳ್ಳ ಶಿಕ್ಷಕರನ್ನಾಗಿಸಲು ಸಹಾಯ ಮಾಡಬೇಕು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪದವಿ ಮತ್ತು ಕನಿಷ್ಠ ಎರಡು ವರ್ಷ ಶಾಲೆ, ಕಾಲೇಜು, ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಬೋಧನೆ ಮಾಡಿದ ಅನುಭವ/ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಜಿಲ್ಲಾ ಸಂಸ್ಥೆಯ ಶೈಕ್ಷಣಿಕ ಬ್ಲಾಕ್‌ನಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಸಂಸ್ಥೆಯು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಾಲ್ಗೊಂಡು ಯಶಸ್ವಿಯಾಗದವರು ಒಂದು ವರ್ಷದ ತನಕ ಮತ್ತೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
ಅಭ್ಯರ್ಥಿಗಳಿಗೆ ಕನಿಷ್ಠ 31,000 ಮಾಸಿಕ ವೇತನ ನಿಗದಿ ಮಾಡಲಾಗಿದೆ. ಅನುಭವ ಹಾಗೂ ವಿದ್ಯಾರ್ಹತೆ ಆಧಾರದ ಮೇಲೆ ಹೆಚ್ಚಿನ ವೇತನ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಿ












Click it and Unblock the Notifications