ಮೈಸೂರಿನಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಮೈಸೂರು, ಆಗಸ್ಟ್ 04 : ಮೈಸೂರಿನ ತಿಲಕ್ ನಗರದಲ್ಲಿರುವ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯಲ್ಲಿ ಒಂದು ಪದವೀಧರ ಶಿಕ್ಷಕ ಹಾಗೂ 2 ಸಹಾಯಕ ಶಿಕ್ಷಕರ ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.

ಸಹಾಯಕ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿ ಮತ್ತು ವಿಶೇಷ ಶಿಕ್ಷಣ (ದೃಷ್ಠಿ ವಿಕಲಚೇತನ) ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದವರಿಗೆ ಮಾಸಿಕ 2,500 ರೂ. ಸಂಭಾವನೆ ನೀಡಲಾಗುತ್ತದೆ.[ಐಸಿಐಸಿಐ ಬ್ಯಾಂಕಿನಲ್ಲಿ Walk in interview]

Apply for teachers post in Mysuru deaf and blind school

ಪದವೀಧರ ಸಹಾಯಕ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು. ಆಯ್ಕೆಯಾದವರಿಗೆ ಮಾಸಿಕ 3000 ರೂ. ಸಂಭಾವನೆ ನೀಡಲಾಗುತ್ತದೆ. ಆಸಕ್ತರು ಆಗಸ್ಟ್ 9ರ ಮಧ್ಯಾಹ್ನ 1.30ರೊಳಗೆ ಅರ್ಜಿ ಸಲ್ಲಿಸಬಹುದು.[KPTCL ನಲ್ಲಿ ಕೆಲಸ ಖಾಲಿ ಇದೆ]

ಅರ್ಜಿ ಸಲ್ಲಿಸಲು ವಿಳಾಸ : ಅಧೀಕ್ಷಕರು, ಅಂಧ ಮಕ್ಕಳ ಸರ್ಕಾರಿ ಶಾಲೆ, ತಿಲಕ್ ನಗರ, ಮೈಸೂರು. ಆಗಸ್ಟ್ 9 ರಂದು ಮಧ್ಯಾಹ್ನ 3 ಗಂಟೆಗೆ ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2497496. [ಮಾನವೀಯತೆಯ ಸಾಕ್ಷಾತ್ಕಾರ ಮಾಡಿಸಿದ ಅಂಧ ಮಕ್ಕಳು!]

ಉದ್ಯೋಗವಕಾಶಗಳು

* ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 24, 2016 ಕೊನೆಯ ದಿನ. [ವಿವರಗಳು ಇಲ್ಲಿವೆ]

* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ. [ವಿವರ ಇಲ್ಲಿದೆ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Government school for deaf and blind in Tilaknagar, Mysuru invited application to fill teachers post. August 9, 2016 last date to submit application.
Please Wait while comments are loading...