ಕೆಎಸ್‌ಒಯು ನೇಮಕಾತಿ; 32 ಬೋಧಕ ಹುದ್ದೆಗಳಿಗೆ ಅರ್ಜಿ ಹಾಕಿ
ಮೈಸೂರು, ಅಕ್ಟೋಬರ್ 30; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್ಒಯು) 32 ಬೋಧಕ ಹುದ್ದೆಗಳಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 11ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನಿಯಮಗಳ ಅನ್ವಯ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.
ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿ
ಪ್ರೊಫೆಸರ್ (7) ಹುದ್ದೆಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಎಚ್‌ಡಿ ವಿದ್ಯಾರ್ಹತೆ ಹೊಂದಿರಬೇಕು. ಅಸೋಸಿಯೇಟ್ ಪ್ರೊಫೆಸರ್ (25) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವವರು ಪದವಿ, ಸಿಎ, ಸ್ನಾತಕೋತ್ತರ ಪದವಿ, ಪಿಎಚ್‌ಡಿ, ಎಂಎ, ಬಿಯೆಡ್, ಎಂಯೆಡ್ ವಿದ್ಯಾರ್ಹತೆ ಹೊಂದಿರಬೇಕು.
ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 150 ಹುದ್ದೆಗಳಿಗೆ ಅರ್ಜಿ
ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಸಹ ಇರುತ್ತದೆ.
ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ; ಕರ್ನಾಟಕದಲ್ಲಿ 135 ಹುದ್ದೆಗೆ ಅರ್ಜಿ ಆಹ್ವಾನ
ಪ್ರೊಫೆಸರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಇತರ ಅಭ್ಯರ್ಥಿಗಳು 1500 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.
ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಇತರ ಅಭ್ಯರ್ಥಿಗಳು 1,200 ರೂ. ಶುಲ್ಕವನ್ನು ಪಾವತಿಸಬೇಕು.
ಆಸಕ್ತ, ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಸ್ವಯಂ ದೃಢೀಕೃತ ದಾಖಲಾತಿಗಳ ಜೊತೆ ನವೆಂಬರ್ 11ರೊಳಗೆ ಅರ್ಜಿಗಳನ್ನು ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಕೆಗೆ ವಿಳಾಸ; Registrar, Karnataka State Open University, Mukthagangothri, Mysuru - 570006, Karnataka.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಿ ksoumysuru.ac.in
ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಕೊಪ್ಪಳ ಜಿಲ್ಲೆಯ ಹಿರಿಯ ಅಪರ ಜಿಲ್ಲಾ ಸರ್ಕಾರಿ ವಕೀಲರು, ತಾಲೂಕು ಅಪರ ಸರ್ಕಾರಿ ವಕೀಲರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ, ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 10 ಕೊನೆಯ ದಿನವಾಗಿದೆ.
ಕೊಪ್ಪಳ ಜಿಲ್ಲೆಯ ಹಿರಿಯ ಅಪರ ಜಿಲ್ಲಾ ಸರ್ಕಾರಿ ವಕೀಲರು, ಯಲಬುರ್ಗಾ ಹಾಗೂ ಗಂಗಾವತಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗಳ ಅವಧಿ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಅರ್ಜಿಗಳನ್ನು ಕರೆಯಲಾಗಿದೆ.
ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5 ಮತ್ತು 26(2) ಹಾಗೂ 12(ಎ)(ಬಿ) ಮತ್ತು (ಸಿ) ರ ಅನ್ವಯ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
7 ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ತಮ್ಮ ಪೂರ್ಣ ವೈಯಕ್ತಿಕ ಹಾಗೂ ಸೇವಾ ವಿವರಗಳೊಂದಿಗೆ ಲಿಖಿತ ಅರ್ಜಿಯನ್ನು ದ್ವಿಪ್ರತಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ನವೆಂಬರ್ 10ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಮಿಯಾಗು ಕಾರ್ಯಕ್ರಮ; ಕೊಪ್ಪಳ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಜಿಲ್ಲೆಯ ಆಸಕ್ತ ಭಾವಿ, ಹಾಲಿ ಉದ್ಯಮಿದಾರರು ಉದ್ದಿಮೆಯನ್ನು ಪ್ರಾರಂಭಿಸಲು ಕಲಬುರಗಿ ವಿಭಾಗಮಟ್ಟದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ನವೆಂಬರ್ 11ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಹಾಗೂ ಯಲಬುರ್ಗಾದ ಕೈಗಾರಿಕಾ ವಿಸ್ತರಣಾಧಿಕಾರಿ ಸೋಮಶೇಖರ ಮೊಬೈಲ್ ಸಂಖ್ಯೆ 8497060159 ಕುಷ್ಟಗಿ ಹಾಗೂ ಗಂಗಾವತಿಯ ಕೈಗಾರಿಕಾ ವಿಸ್ತರಣಾಧಿಕಾರಿ ಸಿದ್ದಯ್ಯ ಮೊಬೈಲ್ ಸಂಖ್ಯೆ 8660204752 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.