ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ, ಫೆಬ್ರವರಿ 23ರ ತನಕ ಅರ್ಜಿ ಹಾಕಿ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೊಪ್ಪಳದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕೊಪ್ಪಳ, ಫೆಬ್ರವರಿ 20; ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 3 ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, 23/2/2023ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ತಾಂತ್ರಿಕ ಕೋಶವನ್ನು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟಿಕ್ ಅಕೌಂಟ್ ಮ್ಯಾನೇಜರ್, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಅವಧಿಗೆ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅಸ್ಪಷ್ಟ ಮಾಹಿತಿ ಇರುವ, ಅಗತ್ಯ ದಾಖಲೆಗಳು ಲಗತ್ತಿಸದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

Apply For Technical Assistant And Other Post At Koppal

ಟೆಕ್ನಿಕಲ್ ಅಸಿಸ್ಟೆಂಟ್ 1 ಹುದ್ದೆ, ವೇತನ 25,000 ರೂ.ಗಳು. ಡಿಸ್ಟಿಕ್ ಅಕೌಂಟ್ ಮ್ಯಾನೇಜರ್ 1 ಹುದ್ದೆ, 23,000 ರೂ. ವೇತನ. ಡೇಟಾ ಎಂಟ್ರಿ ಆಪರೇಟರ್ 1 ಹುದ್ದೆ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ ನೀಡಲಾಗುತ್ತದೆ.

ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ಡಿಪ್ಲೊಮಾ, ಪದವಿ, ಬಿಇ, ಬಿಟೆಕ್, ಎಂಟೆಕ್ ಪದವಿ ಪಡೆದಿರಬೇಕು. ಡಿಸ್ಟಿಕ್ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಬಿಕಾಂ ಅಥವ ಎಂಕಾಂ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಪದವಿ ವಿದ್ಯಾರ್ಹತೆ ನಿಗದಿಗೊಳಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿಗೊಳಿಸಲಾಗಿದೆ. ಅಲ್ಲದೇ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

ಆನ್‌ಲೈನ್ ಮೂಲಕ ಮಾತ್ರ ಆಸಕ್ತರು ಅರ್ಜಿ ಸಲ್ಲಿಸಬೇಕು. ಅಸ್ಪಷ್ಟ ದಾಖಲೆಗಳನ್ನು ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ. ಸ್ವೀಕೃತವಾದ ಅರ್ಜಿಗಳ ದಾಖಲೆಗಳನ್ನು ಸಮಿತಿಯು ಪರಿಶೀಲಿಸಿ ಆಯ್ಕೆ ಪಟ್ಟಿಯನ್ನು ತಯಾರು ಮಾಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+