ಚಿಕ್ಕಮಗಳೂರಲ್ಲಿ ಕೆಲಸ ಖಾಲಿ ಇದೆ, ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಚಿಕ್ಕಮಗಳೂರು, ನವೆಂಬರ್ 16; ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಶಾಖೆ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ 19/11/2022ರ ತನಕ ಅರ್ಜಿ ಸಲ್ಲಿಸಬಹುದಾಗಿದೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ (ಅರಣ್ಯ) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಗೆ 21 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಒಟ್ಟು 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬಿಎಸ್‌ಸಿ (ಫಾರೆಸ್ಟರಿ) ವಿದ್ಯಾರ್ಹತೆ ಹೊಂದಿದವರು ಅರ್ಜಿಗಳನ್ನು ಸಲ್ಲಿಸಬಹುದು. ಎಂಎಸ್‌ಸಿ (ಫಾರೆಸ್ಟರಿ) ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯಾನುಭವ ಅಪೇಕ್ಷಣೀಯ.

Apply For Technical Assistant Post At Chikkamagaluru

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 24,000 ರೂ. ನಿಗದಿ ಮಾಡಲಾಗಿದೆ. ಪ್ರಯಾಣ ಭತ್ಯೆ ಮಾಸಿಕ ರೂ. 2000.. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸರ್ಕಾರಿ ಕಚೇರಿ ಕೆಲಸದ ಅವಧಿಯಲ್ಲಿ ಮಾತ್ರ ನವೆಂಬರ್ 19ರ ತನಕ ಅರ್ಜಿ ಸಲ್ಲಿಸಬಹುದು.

ಬೆಳಗ್ಗೆ 10 ರಿಂದ ಸಂಜೆ 5.30ರ ತನಕ ಅರ್ಜಿಗಳನ್ನು ಸಲ್ಲಿಸಬಹುದು. ಸರ್ಕಾರಿ ರಜೆ ದಿನಗಳಲ್ಲಿ ಅರ್ಜಿ ಸ್ವೀಕಾರ ಮಾಡುವುದಿಲ್ಲ. ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿ 11 ತಿಂಗಳ ಅವಧಿಯದ್ದಾಗಿದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಪರಿಶೀಲನೆ ನಡೆಸಿದ ಬಳಿಕ ಮುಂದುವರೆಸುವ ಕುರಿತು ಜಿಲ್ಲಾ ಪಂಚಾಯಿತಿ ಸಿಇಓ ತೀರ್ಮಾನ ಕೈಗೊಳ್ಳುತ್ತಾರೆ. ದಾಖಲಾತಿ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲು ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅನುಭವ ಪರಿಗಣಿಸಿ ಮೆರಿಟ್ ಪಟ್ಟಿ ತಯಾರು ಮಾಡಲಾಗುತ್ತದೆ.

ಒಂದು ವೇಳೆ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳ ಆಯ್ಕೆಯನ್ನು ರದ್ದುಗೊಳಿಸುವುದು ಮತ್ತು ಮೆರಿಟ್ ಆಧಾರದ ಪ್ರತೀಕ್ಷಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ಮಾಡಲು https://chikkamagaluru.nic.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ದೂರವಾಣಿ ಸಂಖ್ಯೆಗಳು 080-26595899.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+