ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗದಗದಲ್ಲಿ ಕೆಲಸ ಖಾಲಿ ಇದೆ; ಅಕ್ಟೋಬರ್ 17ರ ತನಕ ಅರ್ಜಿ ಹಾಕಿ

|
Google Oneindia Kannada News

ಗದಗ, ಅಕ್ಟೋಬರ್ 07; ಗದಗ ಜಿಲ್ಲಾ ಪಂಚಾಯಿತಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆದಿದೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಗೆ ಒಂದು ತಾಂತ್ರಿಕ ಸಹಾಯಕ (ಸಿವಿಲ್) ಹುದ್ದೆ ಮಂಜೂರಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಎಸ್‌ಬಿಐ ನೇಮಕಾತಿ; 2056 ಹುದ್ದೆಗೆ ಅನ್‌ಲೈನ್ ಮೂಲಕ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; 2056 ಹುದ್ದೆಗೆ ಅನ್‌ಲೈನ್ ಮೂಲಕ ಅರ್ಜಿ ಹಾಕಿ

ಹೊರ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು 17/10/2021ರೊಳಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಗದಗದಲ್ಲಿ ಕೆಲಸ ಮಾಡಬೇಕಿದೆ.

ನೈಋತ್ಯ ರೈಲ್ವೆ ಅಪ್ರೆಂಟಿಸ್ ಹುದ್ದೆ ಭರ್ತಿ; 904 ಹುದ್ದೆಗಳಿವೆ ನೈಋತ್ಯ ರೈಲ್ವೆ ಅಪ್ರೆಂಟಿಸ್ ಹುದ್ದೆ ಭರ್ತಿ; 904 ಹುದ್ದೆಗಳಿವೆ

 Apply For Technical Assistant Post At Gadag Under MGNREGA

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಬಿ.ಟೆಕ್ ಸಿವಿಲ್ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು. ಗರಿಷ್ಠ ವಯೋಮಿತಿ 45 ವರ್ಷಗಳು. ಕನಿಷ್ಠ ಮೂರು ವರ್ಷಗಳ ಸಂಬಂಧಿತ ಅನುಭವವನ್ನು ಹೊಂದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ ಗದಗ ಜಿಲ್ಲಾ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಕೊಡಗು; ಕೆಲಸ ಖಾಲಿ ಇದೆ, ಅ.13ರೊಳಗೆ ಅರ್ಜಿ ಹಾಕಿ ಕೊಡಗು; ಕೆಲಸ ಖಾಲಿ ಇದೆ, ಅ.13ರೊಳಗೆ ಅರ್ಜಿ ಹಾಕಿ

ಗುತ್ತಿಗೆ ಆಧಾರದ ನೇಮಕಾತಿ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಖೇಲೋ ಇಂಡಿಯಾ ನಿಯಾಮಾನುಸಾರ ಗುತ್ತಿಗೆ ಆಧಾರದ ಮೇಲೆ Young Professional, Sports Masseur and Sports Nutritionist ನೇಮಕಾತಿಗಾಗಿ ಮೈಸೂರಿನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಅರ್ಜಿಗಳನ್ನು ಅಕ್ಟೋಬರ್ 11ರ ಒಳಗಾಗಿ ಕಛೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‌ಬಾದ್, ಮೈಸೂರಿನಲ್ಲಿ ನೋಟಿಸ್ ಬೋರ್ಡ್ ನೋಡಬಹುದಾಗಿದೆ. ದೂರವಾಣಿ ಸಂಖ್ಯೆ 0821-2564179 ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಆಹ್ವಾನ; 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು.

ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ ಈ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 16 ರೊಳಗೆ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08272-295628 ಮತ್ತು ವೆಬ್‍ಸೈಟ್ https://bcwd.karnataka.gov.in ಅನ್ನು ನೋಡಬಹುದು. ಸಹಾಯವಾಣಿ ಸಂಖ್ಯೆ 8050770004.

ತರಬೇತಿಗೆ ಅರ್ಜಿ ಆಹ್ವಾನ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2020-21ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ (ಬಿಎ, ಬಿಕಾಂ, ಐ.ಎಸ್‍ಸಿ, ಎಂಎ, ಎಂ.ಕಾಂ, ಎಂ.ಎಸ್ಸಿ, ಎಂಬಿಎ, ಎಂಲಿಬ್ ಐಎಸ್ಸಿ, ಬಿ.ಇಡಿ ಮತ್ತು 2019-20ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕ (ಬಿಎ, ಬಿ.ಕಾಂ) ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮದ ತರಗತಿಗಳು ಆನ್‍ಲೈನ್‍ನ ಮುಖಾಂತರ ಅಕ್ಟೋಬರ್ 8 ರಿಂದ ನಡೆಯಲಿದೆ.

ಈ ಕೌಶಲ್ಯಾಭಿವೃದ್ಧಿ ತರಬೇತಿಯ ಪಠ್ಯ ವಿಷಯ, ವೇಳಾಪಟ್ಟಿ ಮತ್ತು ತರಗತಿಗಳ ಆನ್‍ಲೈನ್ ವೆಬ್‍ಲಿಂಕ್‍ಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಇ-ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಖ್ಯೆಗೆ ಕರೆ ಮಾಡಿ 9611434810.

English summary
Apply for technical assistant post at Gadag zilla panchayat under MGNREGA scheme. Candidates can apply till October 17/10/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X