• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿವಿಧ ಹುದ್ದೆಗೆ ಅರ್ಜಿ ಕರೆದ ಮೈಸೂರು ಜಿಲ್ಲಾ ಪಂಚಾಯಿತಿ

|

ಮೈಸೂರು, ಮಾರ್ಚ್ 25; ಮೈಸೂರು ಜಿಲ್ಲಾ ಪಂಚಾಯಿತಿ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 31/32021 ಕೊನೆಯ ದಿನವಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೈಸೂರು ಜಿಲ್ಲೆಗೆ ತಾಂತ್ರಿಕ ಸಹಾಯಕರು (ಅರಣ್ಯ/ ಕೃಷಿ) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಪಂಚಾಯಿತಿ ಕಚೇರಿ, ಡಿ. ಆರ್‌. ಡಿ. ಎ. ಶಾಖೆಯಲ್ಲಿ ಪಡೆದು, ಭರ್ತಿ ಮಾಡಿ ಕಚೇರಿಗೆ ಸಲ್ಲಿಸಬೇಕು. ತಾಂತ್ರಿಕ ಸಹಾಯಕರು (ಕೃಷಿ) 3 ಹುದ್ದೆ, ತಾಂತ್ರಿಕ ಸಹಾಯಕರು (ಅರಣ್ಯ) 1 ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಏ. 7ರೊಳಗೆ ಅರ್ಜಿ ಹಾಕಿ

ತಾಂತ್ರಿಕ ಸಹಾಯಕರು (ಅರಣ್ಯ) ಅರ್ಜಿ ಹಾಕುವ ಅಭ್ಯರ್ಥಿಗಳು ಕನಿಷ್ಠ ಫಾರೆಸ್ಟ್ರಿ ವಿಯದಲ್ಲಿ ಬಿಎಸ್‌ಸಿ ಪದವಿ ಪಡೆದಿರಬೇಕು. ಎಂಎಸ್‌ಸಿ ಫಾರೆಸ್ಟ್ರಿ ಅಪೇಕ್ಷಣಿಯ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಮಾಸಿಕ ವೇತನ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ವಿವಿಧ ಹುದ್ದೆಗೆ ಅರ್ಜಿ ಕರೆದ ಮಂಡ್ಯ ಜಿಲ್ಲಾ ಪಂಚಾಯಿತಿ

ತಾಂತ್ರಿಕ ಸಹಾಯಕರು (ಕೃಷಿ) 1 ಹುದ್ದೆ. ಅಭ್ಯರ್ಥಿಗಳು ಕನಿಷ್ಠ ಕೃಷಿ ವಿಷಯದಲ್ಲಿ ಬಿಎಸ್‌ಸಿ ಪದವಿ ಪಡೆದಿರಬೇಕು. ಆಪೇಕ್ಷಣಿಯ ಎಂಎಸ್‌ಸಿ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21-40 ವರ್ಷಗಳು. ಮಾಸಿಕ ವೇತನ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ಅಭ್ಯರ್ಥಿಗಳು ಸ್ವ-ವಿವರದೊಂದಿಗೆ ಎರಡು ಭಾವಚಿತ್ರ, ಆಧಾರ್/ ಚುನಾವಣಾ ಗುರುತಿನ ಚೀಟಿ, ಎಸ್‌. ಎಸ್. ಎಲ್. ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಅಂಕಪಟ್ಟಿ, ಸ್ನಾತಕೋತ್ತರ ಅಂಕಪಟ್ಟಿ (ಇದ್ದಲ್ಲಿ) ಕೆಲಸದ ಅನುಭವದ ಪ್ರಮಾಣ ಪತ್ರ ಒಂದು ಸೆಟ್ ನಕಲು ಪ್ರತಿಯನ್ನು ದೃಢೀಕರಿಸಿ ಅರ್ಜಿ ಸಲ್ಲಿಸುವುದು.

5/4/202ರಂದು ಮೈಸೂರಿನಲ್ಲಿ ನಡೆಯುವ ದಾಖಲಾತಿಗಳ ಪರಿಶೀಲನೆಗೆ ಎಲ್ಲಾ ಮೂಲ ದಾಖಲೆಗಳ ಜೊತೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್

English summary
Mysuru zilla panchayat invited applications for the post of technical assistant post. Candidates can apply till March 31, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X