ಹಾಸನದಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್ 31ರೊಳಗೆ ಅರ್ಜಿ ಹಾಕಿ

ಹಾಸನ, ಆಗಸ್ಟ್ 21: ಹಾಸನ ಜಿಲ್ಲೆಯಲ್ಲಿ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೈಲರ್, ನಿರ್ವಾಹಕ ಮತ್ತು ಸಹಾಯಕರ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಆತ್ಮ ಯೋಜನೆಯಡಿ 2023-24ನೇ ಸಾಲಿನ ಆಲೂರು ಮತ್ತು ಅರಕಲಗೂಡು ತಾಲೂಕುಗಳಲ್ಲಿ, ತಾಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗೆ ಮತ್ತು ಬೇಲೂರು ತಾಲ್ಲೂಕಿನ ಮಾದಿಹಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಗೆ ಅರ್ಜಿ ಕರೆಯಲಾಗಿದೆ.

Apply For Technical Manager And Various Jobs At Hassan District

ನೇರ ಗುತ್ತಿಗೆ ಆಧಾರದ ಮೇಲೆ ಸೀಮಿತ ಅವಧಿಗೆ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ, ಅರ್ಹರು ದಿನಾಂಕ 31/8/2023ರ ಸಂಜೆ 5 ಗಂಟೆಯ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಹತೆಗಳು; ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಕೃಷಿ/ ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳು ನೀಡುವ ಕೃಷಿ ಸ್ನಾತ ಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನಿಷ್ಠ 2 ವರ್ಷಗಳ ಕೃಷಿ/ ಕೃಷಿ ಸಂಬಂಧಿತ ವಿಭಾಗಗಳಲ್ಲಿ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 30,000 ರೂ.ಗಳು.

ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಕೃಷಿ/ ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳು ನೀಡುವ ಕೃಷಿ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನಿಷ್ಠ 1 ವರ್ಷಗಳ ಕೃಷಿ/ ಕೃಷಿ ಸಂಬಂಧಿತ ವಿಭಾಗಗಳಲ್ಲಿ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳಿಗೆ ವೇತನ 25,000 ರೂ.ಗಳು.

ಆಸಕ್ತ ಅಭ್ಯರ್ಥಿಗಳು ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಾಸನ ಇಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಪೂರ್ಣ ಮಾಹಿತಿಯೊಂದಿಗೆ ಜಂಟಿ ಕೃಷಿ ನಿರ್ದೇಶಕರು, ಹಾಸನ ಇವರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಾಸನ ಇಲ್ಲಿಗೆ ಸಂಪರ್ಕಿಸಬಹುದು.

ನೇರ ಸಂದರ್ಶನದ ಮಾಹಿತಿ; ಹಿಮತ್ ಸಿಂಕಾ ಲಿನೆನ್ಸ್ ಮಂದ್ರ್ಯ ಟ್ರೆಂಡ್ ಪ್ರೈವೆಟ್ ಲಿಮಿಟೆಟ್‌ನಲ್ಲಿ ಲಭ್ಯವಿರುವ ಟೈಲರ್‌ಗಳು, ನಿರ್ವಾಹಕ ಮತ್ತು ಸಹಾಯಕರ ಹುದ್ದೆಗಳಿಗೆ 18 ರಿಂದ 30 ವರ್ಷ ವಯೋಮಾನದ 150 ಸೆಂ. ಮೀ. ಎತ್ತರವಿರುವ, ಕನಿಷ್ಟ 8ನೇ ತರಗತಿ ಉತ್ತೀರ್ಣರಾಗಿರುವ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

ಆಗಸ್ಟ್ 29ರಂದು ಬೆಳಗ್ಗೆ 10 ಗಂಟೆಗೆ ಹಿಮತ್ ಸಿಂಕಾ ಲಿನೆನ್ಸ್ ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ, ಗೊರೂರು ರಸ್ತೆ, ಹನುಮಂತಪುರ ಆವರಣದಲ್ಲಿ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಮಾನ್ಯತೆ ಪಡೆದ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಹೊಂದಿದ ಅಭ್ಯರ್ಥಿಗಳಲ್ಲದೇ ವಿವಿಧ ಇಲಾಖೆಗಳ, ವಿವಿಧ ಯೋಜನೆ/ ಕಾರ್ಯಕ್ರಮಗಳಲ್ಲಿ ತರಬೇತಿ ಪಡೆದ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸದರಿ ಸಂದರ್ಶನದಲ್ಲಿ ಪಾಲ್ಗೊಂಡು ಉದ್ಯೋಗ ಪಡೆಯಲು ಅವಕಾಶವಿರುತ್ತದೆ.

ಉದ್ಯೋಗಾಂಕ್ಷಿಗಳು ಭಾಗವಹಿಸುವಂತೆ ಮನವಿ ಮಾಡಲಾಗಿದ್ದು, ಆಧಾರ್ ಕಾರ್ಡ್ 4 ಪ್ರತಿಗಳು, ವಿದ್ಯಾರ್ಹತೆ ದಾಖಲೆ ಪ್ರತಿಗಳು ಹಾಗೂ 6 ಭಾವ ಚಿತ್ರಗಳೊಂದಿಗೆ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ, 9742871492, 9742215015 ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+