ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು; ಕೆಲಸ ಖಾಲಿ ಇದೆ, ಅ.13ರೊಳಗೆ ಅರ್ಜಿ ಹಾಕಿ

|
Google Oneindia Kannada News

ಕೊಡಗು, ಅಕ್ಟೋಬರ್ 03; ಕೊಡಗು ಜಿಲ್ಲೆಯಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು 1, ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅಕ್ಟೋಬರ್ 13ರೊಳಗೆ ಅರ್ಜಿ ಸಲ್ಲಿಸಬಹುದು.

ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಎಟಿಎಂಎ) ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು 1 ಹುದ್ದೆ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2021-22ನೇ ಸಾಲಿನ ಸೀಮಿತ ಅವಧಿಗೆ ಸೋಮವಾರಪೇಟೆ ಹಾಗೂ ಶಾಂತಳ್ಳಿ ಹೋಬಳಿಗಳಿಗೆ ಸೇರಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಕಾಲೇಜುಗಳಲ್ಲಿ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಸರ್ಕಾರಿ ಕಾಲೇಜುಗಳಲ್ಲಿ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ವಿದ್ಯಾರ್ಹತೆ ಎಂಎಸ್ಸಿ (ಕೃಷಿ/ ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ಮತ್ತು ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫೀಸ್‍ನಲ್ಲಿ ಪರಿಣತಿ ಹೊಂದಿರಬೇಕು.

ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ ಬಿಎಂಆರ್‌ಸಿಎಲ್ ನೇಮಕಾತಿ; ಅ.27ರ ತನಕ ಅರ್ಜಿ ಹಾಕಿ

Apply For Technical Manager Post At Kodagu

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಬಿಎಸ್ಸಿ, ಎಂಎಸ್ಸಿ (ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ಹಾಗೂ ಕನಿಷ್ಠ 1 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಆಫೀಸ್‍ನಲ್ಲಿ ಪರಿಣತಿ ಹೊಂದಿರಬೇಕು ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಸರ್ಕಾರ ಹೇಳುವುದೇನು?ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಸರ್ಕಾರ ಹೇಳುವುದೇನು?

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷದ ವಯೋಮಿತಿ ನಿಗದಿ ಮಾಡಿರಬೇಕು. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 13ರೊಳಗೆ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರು, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು.

ಅಪ್ರೆಂಟಿಸ್ ಮೇಳ; ಕಲಬುರಗಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಯಲ್ಲಿ ಇದೇ ಅಕ್ಟೋಬರ್ 4ರಂದು ಜಿಲ್ಲಾ ಮಟ್ಟದ ಅಪ್ರೆಂಟಿಷಿಪ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ತಿಳಿಸಿದ್ದಾರೆ.

ಜಿಲ್ಲೆಯ ಐಟಿಐದ ವಿವಿಧ ವೃತ್ತಿಗಳಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳು ನ್ಯಾಪ್ ಪೋರ್ಟಲ್‍ನಲ್ಲಿ ತಮ್ಮ ಹೆಸರು ನೊಂದಾಯಿಸಿಕೊಂಡು ತಮ್ಮ ಎಸ್. ಎಸ್. ಎಲ್. ಸಿ. ಅಂಕಪಟ್ಟಿಯ 4 ಜೆರಾಕ್ಸ್ ಪ್ರತಿ, ಐಟಿಐ, ಅಂಕಪಟ್ಟಿಯ 4 ಝೆರಾಕ್ಸ್ ಪ್ರತಿ, ಆಧಾರ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ (ಮೇಲ್ಕಂಡ ದಿನದಂದು ನಡೆಯುವ ಅಪ್ರೆಂಟಿಶಿಪ್ ಮೇಳದಲ್ಲಿ) ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಬೇಕು.

ಕೊಪ್ಪಳದಲ್ಲಿ ಅಪ್ರೆಂಟಿಸ್ ಮೇಳ; ಕೊಪ್ಪಳ ತಾಲ್ಲೂಕಿನ ಟಣಕನಕಲ್‌ನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 4ರಂದು ಅಪ್ರೆಂಟಿಸ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆ, ಕಾರ್ಖಾನೆ, ಕಂಪನಿಗಳು ಭಾಗವಹಿಸಲಿದ್ದು, ಜಿಲ್ಲೆಯ ಐಟಿಐ ಉತ್ತೀರ್ಣರಾದ ಎಲ್ಲ ವೃತ್ತಿಯ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಉದ್ಯೋಗ ಮೇಳ; ಮೈಸೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 4 ರಂದು ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ವಿದ್ಯಾರಣ್ಯಪುರಂನಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನ ಬಳಿ ಇರುವ ಉದ್ಯಾನವನದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಉದ್ಯೋಗ ಮೇಳದಲ್ಲಿ ಹೆಸರಾಂತ ಸಂಸ್ಥೆಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಿದ್ದಾರೆ. ಎಸ್. ಎಸ್. ಎಲ್. ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ ಹಾಗೂ ನಸಿಂಗ್ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದ ವಯೋಮಿತಿಯೊಳಗಿನ ಪುರುಷ ಹಾಗೂ ಮಹಿಳಾ ನಿರುದ್ಯೋಗಿ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು.

English summary
Apply for technical manager and assistant technical manager post at Kodagu district. Candidates can apply till October 13, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X