• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ನವೆಂಬರ್ 23ರೊಳಗೆ ಅರ್ಜಿ ಹಾಕಿ

|
Google Oneindia Kannada News

ಕೊಪ್ಪಳ, ನವೆಂಬರ್ 13; ಕೊಪ್ಪಳ ನಗರಸಭೆ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿದೆ.

ಕೊಪ್ಪಳ ನಗರಸಭೆ ವತಿಯಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆ ಭರ್ತಿ ಮಾಡಲಾಗುತ್ತಿದೆ.

SSC GD ನೇಮಕಾತಿ 2022: 24000 ಹುದ್ದೆಗಳಿಗೆ ಅರ್ಜಿ ಆಹ್ವಾನ SSC GD ನೇಮಕಾತಿ 2022: 24000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಶಿವಮೊಗ್ಗದಲ್ಲಿ ನವೆಂಬರ್ 15ರಂದು ಉದ್ಯೋಗ ಮೇಳ ಶಿವಮೊಗ್ಗದಲ್ಲಿ ನವೆಂಬರ್ 15ರಂದು ಉದ್ಯೋಗ ಮೇಳ

ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮ. ಅರ್ಜಿ ಸಲ್ಲಿಸಲು ನವೆಂಬರ್ 23ಕೊನೆಯ ದಿನವಾಗಿದೆ.

ಇಂದೇ ತಿಳಿಯಿರಿ: ಜಗತ್ತಿನಲ್ಲೇ ಅತಿಹೆಚ್ಚು ಮಂದಿಗೆ ಉದ್ಯೋಗ ಕೊಟ್ಟಿರುವ ಸಂಸ್ಥೆ ಯಾವುದು? ಇಂದೇ ತಿಳಿಯಿರಿ: ಜಗತ್ತಿನಲ್ಲೇ ಅತಿಹೆಚ್ಚು ಮಂದಿಗೆ ಉದ್ಯೋಗ ಕೊಟ್ಟಿರುವ ಸಂಸ್ಥೆ ಯಾವುದು?

ನಗರಸಭೆ ಕಾರ್ಯಾಲಯದ ಡೇ-ನಲ್ಮ್ ಯೋಜನೆ ವಿಭಾಗದಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 8000 ರೂ.ಗಳು. ಹಾಗೂ 2000 ರೂ. ಟಿಎ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ 45 ವರ್ಷಗಳು. ಅಭ್ಯರ್ಥಿ ಕನಿಷ್ಠ ಪಿಯುಸಿ ಅಥವಾ ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ (ಪ್ರಮಾಣ ಪತ್ರ) ಹೊಂದಿರಬೇಕು. ಪಟ್ಟಣ ವ್ಯಾಪ್ತಿಯ ಸ್ವ-ಸಹಾಯ ಸಂಘದಲ್ಲಿ ಕನಿಷ್ಠ 3 ವರ್ಷದಿಂದ ಸದಸ್ಯೆಯಾಗಿರಬೇಕು.

ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯೆಯಾಗಿರಬೇಕು. ಸ್ವ ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿ ಮಾಡಿರಬೇಕು. ಕಟ್ ಬಾಕಿದಾರರಾಗಿರಬಾರದು. ಸರ್ಕಾರಿ, ಅರೆಸರ್ಕಾರಿ, ಎನ್‌ಜಿಓಗಳಲ್ಲಿ ಉದ್ಯೋಗ ಹೊಂದಿರಬಾರದು. ಕರ್ತವ್ಯ ನಿಮಿತ್ತ ಅಗತ್ಯವಿದ್ದಲ್ಲಿ ಹೊರಸಂಚಾರಕ್ಕೆ ಸಿದ್ದವಿರಬೇಕು.

ಉದ್ಯೋಗದ ನೆರವಿಗೆ ವೆಬ್ ಪೋರ್ಟಲ್; ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಉದ್ಯೋಗದ ನೆರವಿಗಾಗಿ ಅಧಿಕೃತವಾಗಿ ವೆಬ್‍ಪೋರ್ಟಲ್ https://skillconnect.kaushalkar.com ಅನಾವರಣಗೊಳಿಸಿದೆ.

ವೆಬ್‍ಪೋರ್ಟಲ್‌ನಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಂಡಿದ್ದು, ಉದ್ಯೋಗಾಕಾಂಕ್ಷಿಗಳ ಬಯೋಡೇಟಾವನ್ನು ವೀಕ್ಷಿಸಿ ಉದ್ಯೋಗಕ್ಕೆ ಪರಿಗಣಿಸುವುದರಿಂದ ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನು ನೋಂದಾಯಿಸಿಕೊಳ್ಳಬಹುದು.

ಈ ವೆಬ್‍ಪೋರ್ಟಲ್‍ನ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ನಂ 303/528, ಶಾಂತಲ ಟವರ್ಸ್, 2ನೇ ಮಹಡಿ, 3ನೇ ಅಡ್ಡರಸ್ತೆ, ನೆಹರು ರಸ್ತೆ, ಗಾರ್ಡನ್ ಏರಿಯಾ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 8197176710 ಕರೆ ಮಾಡಬಹುದು.

English summary
Apply for Three community resource person post at Koppal. Candidates can apply till November 23rd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X