ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ಗೈಡ್‌ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ, ಜುಲೈ 02: ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ಗೈಡ್‌ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 31ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕಿದೆ.

ಪ್ರವಾಸೋದ್ಯಮವನ್ನು ಅಭಿವೃದ್ಧಿ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರವಾಸಿ ತಾಣಗಳ ಐತಿಹಾಸಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕಲಾವೈವಿಧ್ಯತೆಗಳನ್ನು ಒಳಗೊಂಡ ಸೃಜನಶೀಲತೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ದೇಶ/ ವಿದೇಶಿ ಪ್ರವಾಸಿಗರಿಗೆ ನೀಡಲು ಪ್ರವಾಸಿ ಗೈಡ್‌ಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

Apply For Tourist Guide Post At Kodagu District

'ಒಂದು ರಾಜ್ಯ-ಹಲವು ವಿಸ್ಮಯಗಳು' ಎಂಬುದನ್ನು ಪರಿಚಯಿಸವುದರ ಮೂಲಕ ನಾಡಿನ ಸಮಗ್ರತೆಯ ಬಗ್ಗೆ ವಿವಿಧ ಆಯಾಮಗಳ ಮೂಲಕ ಪ್ರವಾಸಿಗರನ್ನು ನಾಡಿಗೆ ಸೆಳೆಯಲು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.

ಜಿಲ್ಲಾ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 21 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಹಾಗೂ ರಾಜ್ಯ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿಯ ಪ್ರತಿ, ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿಯ ಪ್ರತಿ, ಪದವಿ ಅಂಕಪಟ್ಟಿಯ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ (ತಹಶೀಲ್ದಾರ್/ ಉಪ ತಹಶೀಲ್ದಾರ್ ಇವರಿಂದ ಪಡೆದಿರಬೇಕು), ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿ (ತಹಶೀಲ್ದಾರ್/ ಉಪ ತಹಶೀಲ್ದಾರ್ ಇವರಿಂದ ಪಡೆದಿರಬೇಕು), ವಾಸಸ್ಥಳ ದೃಡೀಕರಣ ಪತ್ರದ ಪ್ರತಿ (ತಹಶೀಲ್ದಾರ್/ ಉಪ ತಹಶೀಲ್ದಾರ್ ಇವರಿಂದ ಪಡೆದಿರಬೇಕು), ನಿರುದ್ಯೋಗಿ ಪ್ರಮಾಣ ಪತ್ರದ ಪ್ರತಿ (ತಹಶೀಲ್ದಾರ್/ ಉಪ ತಹಶೀಲ್ದಾರ್ ಇವರಿಂದ ಪಡೆದಿರಬೇಕು), ಆಧಾರ್ ಕಾರ್ಡ್ ಪ್ರತಿ, ಪ್ಯಾನ್ ಕಾರ್ಡ್ ಪ್ರತಿ, ಚುನಾವಣಾ ಗುರುತಿನ ಚೀಟಿ ಪ್ರತಿ, ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿ ದಾಖಲಾತಿಗಳನ್ನು ಸಲ್ಲಿಸಬೇಕು.

ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಉಪ ನಿದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ, 31ರ ಸಂಜೆ 5 ಗಂಟೆಯೊಳಗೆ ಸಲ್ಲಿಸಲು ತಿಳಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿ ನೀಡಲಾಗುವುದು ಹಾಗೂ ತರಬೇತಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮಾರ್ಗದರ್ಶಿ ಗೈಡ್‍ಲೈಸೆನ್ಸ್ ನೀಡಲಾಗುವುದು. ಆಸಕ್ತರು ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08272-200519 ಅಥವಾ ಇ-ಮೇಲ್ [email protected].

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+