ಶಿವಮೊಗ್ಗ: ಪ್ರವಾಸಿ ಗೈಡ್ ಹುದ್ದೆಗೆ ಅರ್ಜಿ ಆಹ್ವಾನ, ವಿವರಗಳು
ಶಿವಮೊಗ್ಗ, ಜೂನ್ 16: ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜುಲೈ 25 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು 2ನೇ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳಿಗೆ ವಯೋಮಿತಿ 21 ರಿಂದ 45 ವರ್ಷಗಳು ಎಂದು ನಿಗದಿ ಪಡಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ದೇಶ/ ವಿದೇಶಿ ಪ್ರವಾಸಿಗರಿಗೆ ನೀಡಲು 'ಒಂದು ರಾಜ್ಯ-ಹಲವು ವಿಸ್ಮಯಗಳು' ಎಂಬುದನ್ನು ಪರಿಚಯಿಸುವುದರ ಮೂಲಕ ಜಿಲ್ಲೆಯ ಭವ್ಯ ಸಂಸ್ಕೃತಿ, ವೈವಿಧ್ಯತೆಗಳ ವಿಭಿನ್ನ ಕಲೆ-ವಾಸ್ತುಶಿಲ್ಪ ಹಾಗೂ ಜಿಲ್ಲೆಯ ಸಮಗ್ರತೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿವಿಧ ಆಯಾಮಗಳ ಮೂಲಕ ಪ್ರವಾಸಿಗರನ್ನು ಸೆಳೆಯುವಂತಿರಬೇಕು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಪ್ರವಾಸೋದ್ಯಮ ಇಲಾಖೆ, 'ಎ' ಬ್ಲಾಕ್ 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿದ ಜುಲೈ 25 ರೊಳಗಾಗಿ ಸಲ್ಲಿಸಬೇಕು.
ಆಸಕ್ತರು, ಅರ್ಹರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-251444/ 7019740132 ಮೂಲಕ ಸಂಪರ್ಕಿಸುವುದು.
ಉದ್ಯೋಗ ಮೇಳದ ಮಾಹಿತಿ: ಬೆಂಗಳೂರಿನ ದೈಹಿಕ ಅಂಗವಿಕಲರ ಸಂಸ್ಥೆಯು ವಿಕಲಚೇತನ ವ್ಯಕ್ತಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಆಂಡ್ ಕಾಮರ್ಸ್ (ಬಿಸಿಐಸಿ) ಮತ್ತು ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಜೂನ್ 22ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.
ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ತನಕ ಮಹಾರಾಣಿ ಅಮ್ಮಣ್ಣಿ ಲಕ್ಷ್ಮೀ ಕಾಲೇಜ್ ಆವರಣ ಮಲ್ಲೇಶ್ವರಂ, 18ನೇ ಅಡ್ಡ ರಸ್ತೆ ಬೆಂಗಳೂರು ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗಮೇಳದಲ್ಲಿ ಆಸಕ್ತ ವಿಕಲಚೇತನ ಆಭ್ಯರ್ಥಿಗಳು ಭಾಗವಹಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182 295234/ 251676 ಸಂಪರ್ಕಿಸಬಹುದು.
ತರಬೇತಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ: 2024-25ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯ ಕುಟುಂಬ ವಾರ್ಷಿಕ ರೂ. 2.50 ಲಕ್ಷ ಆದಾಯ ಮಿತಿ ಹೊಂದಿದ್ದು, 40 ವರ್ಷದೊಳಗೆ ಇರುವ ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅವಧಿಯಲ್ಲಿರುವ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರು www.twd.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಮಾಡಲು ಜೂನ್ 31 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000ಗಳ ಶಿಷ್ಯವೇತನವನ್ನು ಸರಕಾರಿ, ಹಿರಿಯ ವಕೀಲರ ಮಾರ್ಗದರ್ಶನದಂತೆ 2 ವರ್ಷಗಳ ಕಾಲ ನೀಡಲಾಗುವುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447201ಗೆ ಸಂಪರ್ಕಿಸಬಹುದು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications