ಕೊಂಕಣ ರೈಲ್ವೆ ನೇಮಕಾತಿ; 135 ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಅಕ್ಟೋಬರ್ 09 : ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ ಅಪ್ರೆಂಟೀಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ 30 ನವೆಂಬರ್ 2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕೆಆರ್‌ಸಿಎಲ್ 135 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಡಿಪ್ಲೊಮಾ ಮತ್ತು ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದವರು ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ.
ಮಹಾರಾಷ್ಟ್ರದಲ್ಲಿ 79, ಗೋವಾದಲ್ಲಿ 18 ಮತ್ತು ಕರ್ನಾಟಕದ ಕಾರವಾರದಲ್ಲಿ 38 ಹುದ್ದೆಗಳಿವೆ. ಇಂಜಿನಿಯರಿಂಗ್ ಪದವಿ ಪಡೆದವರಿಗೆ 4984 ಮತ್ತು ಡಿಪ್ಲೊಮಾ ಪದವಿ ಪಡೆದವರಿಗೆ 3542 ರೂ. ತಿಂಗಳ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವವರಿಗೆ 21 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಜುಲೈ 31, 2019ಕ್ಕೆ ಅನ್ವಯವಾಗುವಂತೆ. ಓಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇದೆ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications