
ರಂಗಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ, ಜುಲೈ 8ರ ತನಕ ಅರ್ಜಿ ಹಾಕಿ
ಮೈಸೂರು, ಜೂನ್ 20; ಕರ್ನಾಟಕದ ಸ್ವಾಯತ್ತ ಸಂಸ್ಥೆ ರಂಗಾಯಣ ನಡೆಸುತ್ತಿರುವ ಭಾರತೀಯ ರಂಗಶಿಕ್ಷಣ ಕೇಂದ್ರ-ರಂಗಶಾಲೆಯ 2022-23ನೇ ಸಾಲಿನ ಒಂದು ವರ್ಷದ ರಂಗಶಿಕ್ಷಣದಲ್ಲಿ ಡಿಪ್ಲೊಮಾ ಕೋರ್ಸ್‍ಗಾಗಿ ಇಬ್ಬರು ರಂಗಶಿಕ್ಷಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.
ಹುದ್ದೆಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿ ರಾಷ್ಟ್ರೀಯ ನಾಟಕ ಶಾಲೆಯ ಪದವಿ/ ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ ಡಿಪ್ಲೊಮಾ ಪಡೆದಿರಬೇಕು. ರಂಗಭೂಮಿ ಅನುಭವ, ರಂಗಶಿಕ್ಷಣದಲ್ಲಿ ಶಿಕ್ಷಕರಾಗಿ ದುಡಿದ ಅನುಭವ ಅಪೇಕ್ಷಣೀಯ.
ಶಾಲೆಗಳಿಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಒಪ್ಪಿಗೆ
ಆಸಕ್ತ, ಅರ್ಹರು ಜುಲೈ 8ರೊಳಗೆ ತಲುಪುವಂತೆ ಉಪನಿರ್ದೇಶಕರು, ರಂಗಾಯಣ, ವಿನೋಬನಗರ ರಸ್ತೆ, ಮೈಸೂರು-05 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ರಂಗಾಯಣದ ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ
ಜುಲೈ 13 ರಂದು ಬೆಳಗ್ಗೆ 10.30ಕ್ಕೆ ಜನ್ಮ ದಿನಾಂಕ ದೃಢೀಕರಣ ಪತ್ರ, ಎನ್‍ಎಸ್‍ಡಿ/ ಡಿಪ್ಲೊಮಾ ಪ್ರಮಾಣ ಪತ್ರ, ರಂಗಶಿಕ್ಷಣ ಕೇಂದ್ರದ ಅನುಭವ ಪ್ರಮಾಣ ಪತ್ರ, ರಂಗಭೂಮಿ ಅನುಭವ ಕುರಿತ ಸ್ವವಿವರ ಪತ್ರ, ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೈಸೂರಿನ ರಂಗಾಯಣದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ; ಜೂನ್ 24ರೊಳಗೆ ಅರ್ಜಿ ಹಾಕಿ
ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ ಬದ್ದರಾಗಿರಬೇಕೆಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊರಗುತ್ತಿಗೆ ಸಿಬ್ಬಂದಿ ನೇಮಕ; ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ (ಹಂತ-4)ಅನ್ನು ಅನುಷ್ಠಾನಗೊಳಿಸುವ ಕುರಿತು ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.
ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ಗುತ್ತಿಗೆ ಆಧಾರದಲ್ಲಿ ನಿವೃತ್ತ ಅಥವಾ ನುರಿತ ಬಿ.ಇ ಅಥವಾ ಡಿಪ್ಲೊಮಾ ಇಂಜಿನಿಯರ್‌ಗಳನ್ನು ಹಾಗೂ ನಿವೃತ್ತ ಲೆಕ್ಕ ಅಧೀಕ್ಷಕ/ ಲೆಕ್ಕಾಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಸಹಾಯಕ ಇಂಜಿನಿಯರ್/ ಕಿರಿಯ ಇಂಜಿನಿಯರ್ 2 ಹುದ್ದೆ ಹಾಗೂ ಲೆಕ್ಕ ಅಧೀಕ್ಷಕ/ ಲೆಕ್ಕಾಧಿಕಾರಿ 1 ಹುದ್ದೆ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.koppal.nic.in ಮೂಲಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ವಿದ್ಯಾರ್ಹತೆ, ಸೇವಾ ಅನುಭವ ಮತ್ತು ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರುವ ದಾಖಲೆಗಳನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಅಸ್ಪಷ್ಟ ದಾಖಲೆ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿ ತಿರಸ್ಕರಿಸಲಾಗುತ್ತದೆ.

ನಿವೃತ್ತ ಇಂಜಿನಿಯರ್ ನೇಮಕ ಬಯಸುವ ಹಾಗೂ ಲೆಕ್ಕ ಅಧೀಕ್ಷಕ/ ಲೆಕ್ಕಾಧಿಕಾರಿ ಹುದ್ದೆಗೆ ನಿವೃತ್ತ ಅಭ್ಯರ್ಥಿಗಳು ಸರ್ಕಾರ/ ರಾಜ್ಯ ಸರ್ಕಾರಿ ಸ್ವಾಮ್ಯದ ಅಥವಾ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರಬೇಕು. ಈ ಸಂಬಂಧ ನಿವೃತ್ತಿ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ನೇಮಕಾತಿ ನಿಯಮಗಳು ಹಾಗೂ ಇತರೆ ಹೆಚ್ಚಿನ ಮಾಹಿತಿ ವೆಬ್ ಸೈಟ್‌ನಲ್ಲಿ ಲಭ್ಯವಿದೆ ಎಂದು ಕೊಪ್ಪಳ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯೂಟಿ ಪಾರ್ಲರ್ ತರಬೇತಿ; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ನೀಡಲಾಗುತ್ತಿದೆ.
ತರಬೇತಿ ಪಡೆಯಲು ಆಸಕ್ತಿ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜೂನ್ 26 ಕೊನೆಯ ದಿನ. ಜೂನ್ 27 ರಿಂದ ತರಬೇತಿಯು ಪ್ರಾರಂಭವಾಗಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಕನಿಷ್ಠ 8ನೇ ತರಗತಿ ಪಾಸಾಗಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.
ಆಸಕ್ತರು ಆಧಾರ್‌ಕಾರ್ಡ್, ರೇಷನ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ 3 ಭಾವಚಿತ್ರಗಳು, ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08539-231038 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ; ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ.