ಕಲಬುರಗಿ ನ್ಯಾಯಾಲಯದಲ್ಲಿ ಬೆರಳಚ್ಚುಗಾರ ಹುದ್ದೆ ಖಾಲಿ ಇದೆ

ಕಲಬುರಗಿ, ಏಪ್ರಿಲ್ 25 : ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಹಿಂಬಾಕಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಯನ್ನು ಉಳಿಕೆ ಮೂಲ ವೃಂದದ ಸ್ಥಳೀಯೇತರ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಎಸ್ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Apply for typist post in Kalaburagi district court

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್‌ನಲ್ಲಿ ಡೌನ್ ಲೋಡ್ ಮಾಡಿಕೊಂಡು ಕೈ ಬರಹದಲ್ಲಿ ಭರ್ತಿ ಮಾಡಿ, ಅವಶ್ಯಕ ದಾಖಲೆಗಳನ್ನು ಲಗತ್ತಿಸಿ (ಲಕೋಟೆಯ ಮೇಲೆ ಹುದ್ದೆಯ ವಿವರವನ್ನು ದಪ್ಪ ಅಕ್ಷರದಲ್ಲಿ ಬರೆದು) ಮೇ 10ರ ಮಧ್ಯಾಹ್ನ 2 ಗಂಟೆಯೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಕಲಬುರಗಿ 585102. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಷರತ್ತು, ಮೀಸಲಾತಿ, ವಯೋಮಿತಿ, ವೇತನ ಶ್ರೇಣಿ, ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಮತ್ತಿತರ ಹೆಚ್ಚಿನ ಮಾಹಿತಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+