ಕರ್ನಾಟಕ ಹೈಕೋರ್ಟ್‌ನಲ್ಲಿ 36 ಟೈಪಿಸ್ಟ್ ಹುದ್ದೆಗಳು ಖಾಲಿ ಇವೆ
ಬೆಂಗಳೂರು, ಅಕ್ಟೋಬರ್ 28 : ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ 36 ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 7, 2015.
ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ - 1ರ ಅಭ್ಯರ್ಥಿಗಳಿಗೆ 40 ವರ್ಷಗಳು. 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ, ವಾಣಿಜ್ಯ, ಕಲಾ, ಕಂಪ್ಯೂಟರ್ ಅಪ್ಲಿಕೇಶನ್ ವಿಷಯಗಳಲ್ಲಿ ಅಂಗೀಕೃತ ವಿವಿಯಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್ ಬಳಕೆಯ ಜ್ಞಾನ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸೀನಿಯರ್ ಗ್ರೇಡ್ ಟೈಪ್‌ರೈಟಿಂಗ್ ಪರೀಕ್ಷೆ ಪಾಸಾಗಿರಬೇಕು. [ನೇಮಕಾತಿ ಆದೇಶ ಓದಿ]
http://karnatakajudiciary.kar.nic.in/typistrec.asp ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಭರ್ತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆ ಮಾಡಿದ ಬಳಿಕ ದೊರೆಯುವ ಚಲನ್ ಡೌಲ್ ಲೋಡ್ ಮಾಡಿಕೊಂಡು 250 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್ ಮೂಲಕ ಅಥವ ಯಾವುದೇ ಎಸ್‌ಬಿಐ ಬ್ಯಾಂಕ್‌ಗೆ ಭೇಟಿ ನೀಡುವ ಮೂಲಕ ಶುಲ್ಕ ಪಾವತಿ ಮಾಡಬಹುದಾಗಿದೆ. [ಅರ್ಜಿ ಸಲ್ಲಿಸಲು ವಿಳಾಸ]
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 7, 2015. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನ ನವೆಂಬರ್ 11. ನೇಮಕಾತಿಗೊಂಡವರು ಬೆಂಗಳೂರು ಅಥವ ಧಾರವಾಡ, ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಕೆಲಸ ಮಾಡಬೇಕಾಗುತ್ತದೆ. [ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ]












Click it and Unblock the Notifications