ಉಡುಪಿ; ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಲಿ ಇದೆ
ಉಡುಪಿ, ಜುಲೈ 18; ಉಡುಪಿ ಜಿಲ್ಲೆಯಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸಲು ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯು) ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ 1 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯು) ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ಉತ್ತೀರ್ಣ/ ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರಬೇಕು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 0820-2574810, 2574811. ಆಯಾ ತಾಲೂಕು ಪಂಚಾಯಿತಿಯ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ.
ಕಾನೂನು ಸಲಹೆಗಾರರ; ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಸ್ವಾಧೀನ ಹಾಗೂ ಇತರ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಸಲಹೆ ನೀಡಲು, ವಿವಿಧ ನ್ಯಾಯಾಲಯ ಪ್ರಕರಣಗಳಿಗೆ ಕಂಡಿಕೆವಾರು ಉತ್ತರಗಳನ್ನು ಸಿದ್ಧಪಡಿಸಲು ಕಾನೂನು ಸಲಹೆಗಾರರನ್ನು ನೇಮಕ ಮಾಡಲಾಗುತ್ತಿದೆ.
ಈ ಹುದ್ದೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶರು, ನಿವೃತ್ತ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್.ಎಲ್.ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಉಪ ತಹಶೀಲ್ದಾರ್‌ರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿಯ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2574925 ಕರೆ ಮಾಡಬಹುದಾಗಿದೆ.
ಅತಿಥಿ ಉಪನ್ಯಾಸರ ನೇಮಕ; ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೊಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು, ಎಂ.ಟೆಕ್, ಬಿಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0820-2950101, 9880510585.











Click it and Unblock the Notifications