ಬೆಂಗಳೂರು ನಗರ ಜಿಲ್ಲೆ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 20; ಉದ್ಯೋಗ ಹುಡುತ್ತಿರುವ ಯುವಕ/ ಯುವತಿಯರಿಗೆ ಸಿಹಿಸುದ್ದಿ. ಬೆಂಗಳೂರು ನಗರ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರಗಳು ಇಲ್ಲಿವ ನೋಡಿ.
ಅಂಗವಿಕಲರ ಪುನರ್ವಸತಿ ಕೇಂದ್ರಕ್ಕೆ ಗೌರವ ಧನದ ಆಧಾರದ ಮೇಲೆ ಸಂರ್ದಶನದ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ 18 ರಿಂದ 45 ವರ್ಷಗಳ ವಯೋಮಿತಿಯಲ್ಲಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಫಿಜಿಯೋಥೆರಪಿಸ್ಟ್, ಆಕ್ಯುಪೇಶನಲ್ ಥೆರಪಿಸ್ಟ್ ಪೂರ್ಣಾವಧಿ, ಲೆದರ್ ವರ್ಕರ್, ಶೂ ಮೇಕರ್, ಸ್ವೀಚ್ ಥೆರಪಿಸ್ಟ್ ಮತ್ತು ಆಡಿಯಾಲಿಜಿಸ್ಟ್, ಮೊಬಿಲಿಟಿ ಇನ್ಸ್ ಟ್ರಕ್ಟರ್, ಇಯರ್ ಮೊಲ್ಡ್ ಟೆಕ್ನಿಷಿಯನ್, ಕೀಲು ಮತ್ತು ಮೂಳೆ ತಜ್ಞರು, ಆಪ್ತಾಲ್ಮೋಲಜಿಸ್ಟ್, ಇ.ಎನ್.ಟಿ ಸ್ಪೇಷಲಿಸ್ಟ್ ಮತ್ತು ಸೈಕಿಯಾಟ್ರಿಸ್ಟ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಅಧ್ಯಕ್ಷರು/ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ರವಿ ಕಿರ್ಲೋಸ್ಕರ್ ಆಸ್ಪತ್ರೆ ಆವರಣ, ಪೀಣ್ಯ, 1 ಹಂತ, ಬೆಂಗಳೂರು -560058 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಜುಲೈ 25ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 804179472, 8431308600, 9164496483 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಪ್ರಕಟಣೆ ಹೇಳಿದೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ; 2022-23ನೇ ಸಾಲಿನ ಶಿಶು ಅಭಿವೃದ್ಧಿ ಯೋಜನೆ ಬೆಂಗಳೂರು ಕೇಂದ್ರ ಇಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 4ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ಕೇಂದ್ರ ಯೋಜನೆ. 3ನೇ ಕ್ರಾಸ್, ಕಬ್ಬಡಿ ಕ್ರೀಡಾಂಗಣ ಹತ್ತಿರ, ಬಿ.ಬಿ.ಎಂ.ಪಿ ಕಟ್ಟಡ, ಮೊದಲನೇ ಮಹಡಿ, ಗೋವಿಂದರಾಜನಗರ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-23204490/ 9901074633.
ಸರ್ಕಾರಿ ವಕೀಲರ ಹುದ್ದೆ; ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿರುವುದರಿಂದ ಆ ಹುದ್ದೆಯನ್ನು ಹೊಸದಾಗಿ ತುಂಬಲು 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 3 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಕೆಂಪೇಗೌಡ ರಸ್ತೆ, ಬೆಂಗಳೂರು 560009 ಅಥವಾ ದೂರವಾಣಿ ಸಂಖ್ಯೆ 080-22211292, 22211106 ಅನ್ನು ಸಂಪರ್ಕಿಸಬಹುದು.
ಆನೇಕಲ್‌ನಲ್ಲಿ ಕೆಲಸ ಖಾಲಿ ಇದೆ; ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಜಿಲ್ಲಾ ಸರ್ಕಾರಿ ವಕೀಲರ ರಾಜೀನಾಮೆ ಹಿನ್ನಲೆಯಲ್ಲಿ ರಾಜೀನಾಮೆಯಿಂದ ತೆರವಾದ ಹುದ್ದೆಯನ್ನು ಭರ್ತಿ ಮಾಡಲು 7 ವರ್ಷಗಳ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-22211292, 22211106 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications