ಅತಿಥಿ ಉಪನ್ಯಾಸಕ, ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಮೇ 24; ಕೊಪ್ಪಳದಲ್ಲಿ ಎರಡು ಅತಿಥಿ ಉಪನ್ಯಾಸಕರ ಹುದ್ದೆ, ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ ನಡೆಯಲಿದೆ. ಈ ಹುದ್ದೆಯನ್ನು ತಾತ್ಕಾಲಿಕವಾಗಿ ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಾಗುತ್ತಿದೆ.

ನೇಮಕಾತಿ ಬಯಸುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಭಂದಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಆಗಮಿಸಬೇಕು.
ನೇರ ಸಂದರ್ಶನ ಜೂನ್ 2ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ಕಛೇರಿಯಲ್ಲಿ ನಡೆಯಲಿದೆ ಎಂದು ಧಾರವಾಡ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ಹುದ್ದೆ; ಕೊಪ್ಪಳ ತಾಲೂಕಿನ ದದೇಗಲ್‌ನಲ್ಲಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಮೆಕಟ್ರಾನಿಕ್ಸ್ ವಿಭಾಗದಲ್ಲಿ ಖಾಲಿ ಇರುವ ಎರಡು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ.
ಡಿಪ್ಲೋಮಾ ಮೆಕಟ್ರಾನಿಕ್ಸ್ ವಿಭಾಗದಲ್ಲಿ ಹುದ್ದೆಗಾಗಿ ಅನುಭವವುಳ್ಳ ಎಮ್. ಟೆಕ್ ಇನ್ ಎಲೆಕ್ಟ್ರಾನಿಕ್ಸ್ ಅಥವಾ ಬಿ.ಇ ಇನ್ ಎಲೆಕ್ಟ್ರಾನಿಕ್ಸ್ ಪದವಿ ಹೊಂದಿದ ಆಸಕ್ತ ಆಕಾಂಕ್ಷಿಗಳು ಜೂನ್ 5 ರೊಳಗಾಗಿ ಜಿಟಿಟಿಸಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತು ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯಕ್ಕೆ ಅಥವಾ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ವಿಭಾಗದ ಮುಖ್ಯಸ್ಥರಾದ ಮೌನೇಶ್ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 7507094445.
ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಹುದ್ದೆಯನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಕಾರಣಕ್ಕೂ ಖಾಯಂ ನೇಮಕಾತಿಯೆಂದು ಪರಿಗಣಿಸುವುದಿಲ್ಲ ಹಾಗೂ ಸರ್ಕಾರಿ ನೌಕರರಿಗೆ ಅನ್ವಯವಾಗುವ ಪಿಂಚಣಿ/ ಜಿ.ಪಿ.ಎಫ್/ ಪಿ.ಎಫ್. ಇತರೆ ವಿಶೇಷ ರಜೆ ಸೌಲಭ್ಯಗಳು ಅನ್ವಯವಾಗುವುದಿಲ್ಲ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಂಬಿಬಿಎಸ್ ಪದವಿ ಪಡೆದಿರಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ವೆಬ್‍ಸೈಟ್ https://sims.karnataka.gov.in ಭೇಟಿ ನೀಡಬಹುದು. ಅರ್ಜಿದಾರರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 29ರೊಳಗಾಗಿ ಸಲ್ಲಿಸಬೇಕು.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ.












Click it and Unblock the Notifications