• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಳ್ಳಾರಿ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

|

ಬಳ್ಳಾರಿ, ಅಕ್ಟೋಬರ್ 19 : ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಇ-ಸಂಜೀವಿನಿ ಕಾರ್ಯಕ್ರಮದ ಅಡಿಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 27ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಂ. ಬಿ. ಬಿ. ಎಸ್ ವಿದ್ಯಾಭ್ಯಾಸ ಮಾಡಿರಬೇಕು. ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಸಿಹಿ ಸುದ್ದಿ

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಅಕ್ಟೋಬರ್ 27ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳಿಗೆ ಅಕ್ಟೋಬರ್ 28ರಂದು ಸಂದರ್ಶನ ನಡೆಸಲಾಗುತ್ತದೆ.

ಐಐಎಸ್ಸಿ ನೇಮಕಾತಿ 2020: 85 ಸಹಾಯಕ ಹುದ್ದೆಗಳಿಗೆ ಅರ್ಜಿ

ಹೆಚ್ಚಿನ ಮಾಹಿತಿಗೆ 08392-270710 ಸಂಖ್ಯೆಗೆ ಕರೆ ಮಾಡಬಹುದು ಅಥವಾ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಬಹುದು.

SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ: ಬಳ್ಳಾರಿ ಸಮನ್ವಯ ಶಿಕ್ಷಣ ಕಾರ್ಯಕ್ರಮದಡಿ ಹೂವಿನ ಹಡಗಲಿ ಪ್ರೌಢ ವಿಭಾಗದ ಬಿಐಇಆರ್‍ಟಿ ಮತ್ತು ಬಳ್ಳಾರಿ ಪೂರ್ವ ಪ್ರಾಥಮಿಕ ವಿಭಾಗದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರೌಢ ವಿಭಾಗಕ್ಕೆ ಅರ್ಜಿ ಸಲ್ಲಿಸುವವರು ಯಾವುದೇ ಪದವಿ ಪಡೆದಿರಬೇಕು, ವಿಶೇಷ ಬಿಇಡಿ ಹೊಂದಿದಬೇಕು. ನೇರಗುತ್ತಿಗೆ ಅಡಿಯಲ್ಲಿ ಕಾರ್ಯನಿರ್ವಹಿಸಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಅಭ್ಯರ್ಥಿಗಳು ಅಕ್ಟೋಬರ್ 22 ರೊಳಗಾಗಿ ಉಪನಿರ್ದೇಶಕರು ಮತ್ತು ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಕೋಟೆ, ಬಳ್ಳಾರಿ ಇವರಿಗೆ ಅರ್ಜಿ ಸಲ್ಲಿಸಬಹುದು.

English summary
Apply for various posts in Ballary district. Candidates can apply till October 27, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X