ಯಾದಗಿರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿವರಗಳು
ಯಾದಗಿರಿ, ಫೆಬ್ರವರಿ 11: ಯಾದಗಿರಿ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಪ್ಯಾರಾ ಮೆಡಿಕಲ್ ವರ್ಕರ್ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಅಭ್ಯರ್ಥಿಗಳು ಫೆಬ್ರವರಿ 18ರ ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಕಾರ್ಯ ನಿರ್ವಹಣೆ ಮಾಡಲು ಪ್ಯಾರಾ ಮೆಡಿಕಲ್ ವರ್ಕರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನರೇ ಸಂದರ್ಶನಕ್ಕೆ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಹಾಜರಾಗಬಹುದು.
ಅಗತ್ಯ ದಾಖಲಾತಿಗಳೊಂದಿಗೆ ಅಭ್ಯರ್ಥಿಗಳು ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08473-253765 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ನೇಮಕಾತಿ; ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‌ಸೈಟ್ ನ ಮೂಲಕ ಸಲ್ಲಿಸಬೇಕು. 2021 ರ ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಂಗನವಾಡಿ ಕಾರ್ಯಕರ್ತೆ; ಯಾದಗಿರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಯಡಿಯಲ್ಲಿ ವಿವಿಧ ಗ್ರಾಮ ಪಂಚಾಯತಿ ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 13 ಅಂಗನವಾಡಿ ಕಾರ್ಯಕರ್ತೆ ಹಾಗೂ 34 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು 2021ರ ಮಾರ್ಚ್ 7 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಹಾಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಗಂಜ್ ಏರಿಯಾ, ದೂರವಾಣಿ ಸಂಖ್ಯೆ 08479-243254.
ಸುರಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಳೆ ಕೋರ್ಟ ಕಟ್ಟಡ ಜೈಲ್ ಹತ್ತಿರ, ಸುರಪುರ ದೂ. 08443-256808, ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಸ್ತ್ರೀ ಶಕ್ತಿ ಭವನ, ಜಿಲ್ಲಾ ಆಸ್ಪತ್ರೆ ರಸ್ತೆ, ದೂ. 08473-252265.
ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಗುಮಡಲ್ ಕಾಂಪ್ಲೆಕ್ಸ್, ಮುತ್ತೂಟ್ ಫೈನಾನ್ಸ್ ಹಿಂದುಗಡೆ ದೂ. 08473-225035 ಸಂಪರ್ಕಿಸಬಹುದಾಗಿದೆ.












Click it and Unblock the Notifications