• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಗಲಕೋಟೆ; ಕೆಲಸ ಖಾಲಿ ಇದೆ, ಡಿ. 23ರೊಳಗೆ ಅರ್ಜಿ ಹಾಕಿ

|
Google Oneindia Kannada News

ಬಾಗಲಕೋಟೆ, ನವೆಂಬರ್ 20; ಬಾಗಲಕೋಟೆ ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 23 ಕೊನೆಯ ದಿನವಾಗಿದೆ.

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ 9 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳು 2020ರ ನಿಯಮಗಳನ್ವಯ ಭರ್ತಿ ಮಾಡಲಾಗುತ್ತಿದೆ.

4,100 ಉದ್ಯೋಗ ಕಡಿತಕ್ಕೆ ಮುಂದಾದ ಸಿಸ್ಕೋ 4,100 ಉದ್ಯೋಗ ಕಡಿತಕ್ಕೆ ಮುಂದಾದ ಸಿಸ್ಕೋ

ಖಾಲಿ ಇರುವ ಹುದ್ದೆಗಳು ಕರವಸೂಲಿಗಾರ (ಕಲೆಕ್ಟರ್) 10, ಕ್ಲರ್ಕ್‌ ಕಂ ಡಾಟಾ ಎಂಟ್ರಿ ಅಪರೇಟರ್ 12, ಅಟೆಂಡರ್ (ಜವಾನ) 32 ಸೇರಿ ಒಟ್ಟು 54 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಿಶೇಷ ರಿಸರ್ವ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ ವಿಶೇಷ ರಿಸರ್ವ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ

ಈ ಕೆಳಕಂಡ ಹುದ್ದೆಗಳು ಯಾವ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇದೆಯೋ, ಆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರ್‌ರಿಂದ ವಾಸಸ್ಥಳ ದೃಢೀಕರಣ ಪತ್ರವನ್ನು (ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಪಡೆದಿರುವ) ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ.

SSC GD ನೇಮಕಾತಿ 2022: 24000 ಹುದ್ದೆಗಳಿಗೆ ಅರ್ಜಿ ಆಹ್ವಾನ SSC GD ನೇಮಕಾತಿ 2022: 24000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸಿದ ಕನಿಷ್ಠ ವೇತನ ನೀಡಲಾಗುತ್ತಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಭರ್ತಿ ಮಾಡಿದ ಬಳಿಕ ಚಲನ್ ಪ್ರಿಂಟ್ ತೆಗೆದು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು.

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ. 500, ಪ್ರವರ್ಗ 2(ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳಿಗೆ ರೂ. 300. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕರಿಗೆ ರೂ. 200 ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ; ಕರ ವಸೂಲಿಗಾರ ಹುದ್ದೆಗೆ ಅಭ್ಯರ್ಥಿಗಳು ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕಂಪ್ಯೂಟರ್ ತರಬೇತಿ ಕೋರ್ಸ್‌ನಲ್ಲಿ ಕೇಂದ್ರ ಅಥವ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್‌ನಲ್ಲಿ ಕೇಂದ್ರ ಅಥವ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಅಟೆಂಡರ್ (ಜವಾನ) ಹುದ್ದೆಗೆ ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ http://bagalkot.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

English summary
Bagalkot zilla panchayat invited applications for bill collector, clerk, attender post. Candidates can apply till December 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X