ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಬಳ್ಳಾರಿ, ಡಿಸೆಂಬರ್ 21; ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡೇ-ನಲ್ಮ್ ಯೋಜನೆಯಡಿ ಡೇ-ನಲ್ಮ್ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯ ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 1 ಹುದ್ದೆ ಭರ್ತಿ ಮಾಡಲಾಗುತ್ತಿದ್ದು, ಇದು ಗುತ್ತಿಗೆ ಆಧಾರಿತವಾಗಿರುತ್ತದೆ.

ಅರ್ಜಿ ಸಲ್ಲಿಸುವವರು ಕನಿಷ್ಠ ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು ಎಂದು ನಿಗದಿ ಮಾಡಲಾಗಿದೆ. ಸ್ವ-ಸಹಾಯ ಸಂಘದ ಸದಸ್ಯರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

Apply For Various Post At Ballari Till December 31st

ಅರ್ಜಿಗಳನ್ನು ಸಲ್ಲಿಸಲು ಜನವರಿ 2 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಮಹಾನಗರ ಪಾಲಿಕೆಯ (ವಲಯ ಕಚೇರಿ-2) ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು.
ಕರೆ ಮಾಡಲು ದೂರವಾಣಿ ಸಂಖ್ಯೆಗಳು 08392-273479/ 278168.

ಜಿಲ್ಲಾ ಸಂಯೋಜಕರ ಹುದ್ದೆ; ಮಹಾತ್ಮಗಾಂಧಿ ನರೇಗಾ ಯೋಜನೆಯ ಜಲ ಸಂಜೀವಿನಿ ಕಾರ್ಯಕ್ರಮದಡಿ 2023-24ನೇ ಸಾಲಿನಲ್ಲಿ ಜಲ ಸಂಜೀವಿನಿ ಯೋಜನೆಯ ಮೇಲ್ವಿಚಾರಣೆ ಮಾಡಲು ಜಲ ಸಂಜೀವಿನಿ ಜಿಲ್ಲಾ ಸಂಯೋಜಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಈ ಹುದ್ದೆಯನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಲಿಂಗಮೂರ್ತಿ ಹೇಳಿದ್ದಾರೆ.

ಅಭ್ಯರ್ಥಿಗಳು ಜಿಲ್ಲಾ ಪಂಚಾಯತಿಯ ಮಹಾತ್ಮ ಗಾಂಧಿ ನರೇಗಾ ಕೋಶದಲ್ಲಿ ಅರ್ಜಿಗಳನ್ನು ಪಡೆದು ಡಿಸೆಂಬರ್ 30 ರೊಳಗೆ ಸಲ್ಲಿಸಬೇಕು. ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿ ಒಳಗಿರಬೇಕು.

ಅರ್ಹತೆಗಳು: ಅರ್ಜಿ ಸಲ್ಲಿಸುವವರು ಬಿಎಸ್ಸಿ (ಅಗ್ರಿಕಲ್ಚರ್) ಅಥವಾ ಬಿ.ಟೆಕ್ (ಅಗ್ರಿಕಲ್ಚರ್ ಇಂಜಿನಿಯರಿಂಗ್) ಪದವಿಧರರಾಗಿರಬೇಕು. ಕೃಷಿ, ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳು ಜಲಾನಯನ ಅಭಿವೃದ್ಧಿ ಕಾರ್ಯಕ್ರಮದ ಕನಿಷ್ಠ 10 ವರ್ಷ ಅನುಭವ ಹೊಂದಿರಬೇಕು.

ಕನಿಷ್ಠ ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯಲ್ಲಿ ನಿವೃತ್ತಿ ಹೊಂದಿರುವ ಅಧಿಕಾರಿಗಳು. ಜಿಲ್ಲಾ ಪಂಚಾಯತಿ ಹಾಗೂ ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮರ್ಥ್ಯ ಹೊಂದಿರಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಜನವರಿ 2ರಂದು ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50 ಸಾವಿರ ಮತ್ತು 5 ಸಾವಿರ ಪ್ರಯಾಣ ಹಾಗೂ ಇತರೆ ಭತ್ಯೆಗಳು ಇರುತ್ತದೆ.

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಆಯಾ ಜಿಲ್ಲಾ ಪಂಚಾಯತಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08392-266130.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+