ಬೆಂಗಳೂರಲ್ಲಿ ಕೆಲಸ ಖಾಲಿ ಇದೆ; ಜೂನ್ 23ರ ತನಕ ಅರ್ಜಿ ಹಾಕಿ
ಬೆಂಗಳೂರು, ಜೂನ್ 16: ಬೆಂಗಳೂರು ನಗರ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ, ಪ್ರಧಾನ ಮಂತ್ರಿ ಮಾತೃವಂಧನ ಯೋಜನೆಯಡಿ ವಿವಿಧ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹರು ಜೂನ್ 23ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು ಎಂದು ಪ್ರಕಟಣೆ ತಿಳಿಸಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮಾತೃವಂಧನ ಯೋಜನೆಯಡಿ ಗೌರವಧನದ ಆಧಾರದ ಮೇರೆಗೆ ಬೆಂಗಳೂರು ನಗರ ಜಿಲ್ಲೆಗೆ ಜಿಲ್ಲಾ ಕಾರ್ಯಕ್ರಮ ಸಂಯೋಜಕರು 1 ಹಾಗೂ ಜಿಲ್ಲಾ ಯೋಜನಾ ಸಹಾಯಕರು 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹುದ್ದೆಗೆ ಸ್ನಾತಕೋತ್ತರ ಪದವಿ ಅಥವಾ ಸಮಾಜ ವಿಜ್ಞಾನ ವಿಷಯಗಳಲ್ಲಿ ಪದವಿ ಹೊಂದಿರಬೇಕು. ಜಿಲ್ಲಾ ಯೋಜನಾ ಸಹಾಯಕರು ಹುದ್ದೆಗೆ ಯಾವುದೇ ಪದವಿ ಅಥವಾ ಸಮಾಜ ವಿಜ್ಞಾನ ವಿಷಯಗಳಲ್ಲಿ ಪದವಿ ಹೊಂದಿರಬೇಕು ಎಂದು ಪ್ರಕಟಣೆ ಹೇಳಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು ಕಛೇರಿಯಿಂದ ಪಡೆದುಕೊಂಡು ಜೂನ್ 23ರ ಸಂಜೆ 5.3೦ರೊಳಗೆ ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ. ಹೆಚ್.ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26578688ಗೆ ಸಂಪರ್ಕಿಸಬಹುದು.
ರಾಷ್ಟ್ರೀಯ ಪೋಷಣ್ ಅಭಿಯಾನ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಗೌರವಧನದ ಆಧಾರದ ಮೇರೆಗೆ ಬೆಂಗಳೂರು ನಗರ ಜಿಲ್ಲೆಗೆ ಜಿಲ್ಲಾ ಸಮನ್ವಯಾಧಿಕಾರಿ ಹುದ್ದೆ 1 ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಕೇಂದ್ರ, ಆನೇಕಲ್ ತಾಲ್ಲೂಕು ಸಮನ್ವಯಾಧಿಕಾರಿಗಳ 5 ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.
ಜಿಲ್ಲಾ ಸಮನ್ವಯಾಧಿಕಾರಿ ಹುದ್ದೆಗೆ ಪದವಿ ಹಾಗೂ ತಾಲ್ಲೂಕು ಸಮನ್ವಯಾಧಿಕಾರಿಗಳ ಹುದ್ದೆಗಳಿಗೆ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು ಕಛೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ. ಹೆಚ್. ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿ ಪಡೆದು, ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜೂನ್ 23ರ ಸಂಜೆ 5.3೦ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26578688ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.












Click it and Unblock the Notifications