ಬೀದರ್‌; ಕೆಲಸ ಖಾಲಿ ಇದೆ, ಅ.16ರೊಳಗೆ ಅರ್ಜಿ ಹಾಕಿ

ಬೀದರ್, ಅಕ್ಟೋಬರ್ 09 : ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 16ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಂತ್ರಜ್ಞರು, ಎಂಬಿಬಿಎಸ್ ವೈದ್ಯರು, ಸ್ಟಾಫ್ ನರ್ಸ್, ಪ್ರಯೋಗ ಶಾಲಾ ತಂತ್ರಜ್ಞರು, ಡಾಟಾ-ಎಂಟ್ರಿ-ಆಪರೇಟರ್ ಹಾಗೂ ಗ್ರೂಪ್ ಡಿ ಹುದ್ಧೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ಆಯ್ಕೆಯಾದ ಅಭ್ಯರ್ಥಿಗಳು 6 ತಿಂಗಳ ಅವಧಿಗಾಗಿ ಕಾರ್ಯ ನಿರ್ವಹಣೆ ಮಾಡಬಹುದು. ಆಸಕ್ತಿವುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 16ರ ಸಂಜೆ 5.30.

Apply For Various Post At Bidar Institute Of Medical Sciences

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 50 ರೂ.ಶುಲ್ಕ ಪಾವತಿಸಿ ಖುದ್ದಾಗಿ ಕಚೇರಿಯಿಂದ ನಿಗದಿತ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ಸಂಬಂಧಿತ ದೃಢೀಕೃತ ದಾಖಲಾತಿಗಳನ್ನು ಖುದ್ದಾಗಿ ಕಚೇರಿಯ ಸಮಯದಲ್ಲಿ ಬಂದು ಸಲ್ಲಿಸಬೇಕು.

ಅಭ್ಯರ್ಥಿಗಳು ಅರ್ಜಿಗಳನ್ನು ಬೀದರ್ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘ, ಜಿಲ್ಲಾಧಿಕಾರಿಗಳ ಕಛೇರಿ, ಬೀದರ್ ಕಛೇರಿಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ 08482-229659 ಅಥವಾ 9448222989 ನಂಬರ್‌ಗೆ ಕರೆ ಮಾಡಲು ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+