ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಸ್‌ಜಿ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸಕ್ಕೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಆಗಸ್ಟ್ 29; ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್ (ಸಿಎಸ್‌ಜಿ) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 30/9/2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್ (ಇ-ಆಡಳಿತ ಸಚಿವಾಲಯ, ಇದರ ಅಧೀನದಲ್ಲಿ ಕರ್ನಾಟಕ ರಾಜ್ಯ ಸ್ಥಾಪಿಸಿರುವ ಮತ್ತು ಕರ್ನಾಟಕ ಸಂಘ ಸಂಸ್ಥೆಯಗಳ ನೋಂದಣಿ ಅಧಿನಿಯಮ 1960ರ ಅನ್ವಯ ನೋಂದಣಿಯಾಗಿರುವ ಒಂದು ಸಂಸ್ಥೆಯಾಗಿದೆ).

ಮೈಸೂರು; ಮಿನಿ ಉದ್ಯೋಗ ಮೇಳಕ್ಕೆ ಹೆಸರು ನೋಂದಾಯಿಸಿ ಮೈಸೂರು; ಮಿನಿ ಉದ್ಯೋಗ ಮೇಳಕ್ಕೆ ಹೆಸರು ನೋಂದಾಯಿಸಿ

ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ ಸಂಸ್ಥೆಯಲ್ಲಿ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 142 ಹುದ್ದೆಗಳಿಗೆ ಅರ್ಜಿ ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 142 ಹುದ್ದೆಗಳಿಗೆ ಅರ್ಜಿ

Apply For Various Post At Centre For Smart Governance

ಪ್ರಾಜೆಕ್ಟ್ ಲೀಡ್ 5, ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ 8, ಸಾಫ್ಟ್‌ವೇರ್ ಇಂಜಿನಿಯರ್ 43, ಡೇಟಾಬೇಸ್ ಡಿಸೈನರ್ 4, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ 2, ಸಿಸ್ಟಮ್ ಅಡ್ಮಿನಿಸ್ಟ್ರೇಟರ್ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಎಸ್‌ಬಿಐ ನೇಮಕಾತಿ; 46 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; 46 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳಿಗೆ ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್ ನೇಮಕಾತಿ ನಿಯಮಗಳ ಅನ್ವಯ ವೇತನವನ್ನು ನಿಗದಿ ಮಾಡಲಾಗಿದೆ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸೆಂಟರ್ ಫಾರ್ ಸ್ಮಾರ್ಟ್‌ ಗವರ್ನೆನ್ಸ್ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಇ-ಮೇಲ್ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಸೆಪ್ಟೆಂಬರ್ 30ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-4211 9003. ಅಭ್ಯರ್ಥಿಗಳಿಗೆ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ csg.karnataka.gov.in

Recommended Video

ಪ್ಲೀಸ್ ವೋಟ್ ಹಾಕಿ ಇಲ್ದಿದ್ರೆ ನನ್ನ ಲೈಫ್ ಅಂತ್ಯವಾಗುತ್ತೆ ಎಂದು ವಿವಾದ ಸೃಷ್ಟಿಸಿದ ಬ್ರೆಜಿಲ್ ಅಧ್ಯಕ್ಷ | Oneindia

English summary
Centre for smart governance invited applications for various post. Candidates can apply till September 30, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X