ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ, ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಚಿಕ್ಕಮಗಳೂರು, ಸೆಪ್ಟೆಂಬರ್ 01; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಚಿಕ್ಕಮಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 15 ಸೆಪ್ಟೆಂಬರ್ ಕೊನೆಯ ದಿನವಾಗಿದೆ.

ಬೆರಳಚ್ಚುಗಾರ 7, ಬೆರಳಚ್ಚು-ನಕಲುಗಾರ 1, ಸೇವಕ 12 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಬೆರಳಚ್ಚುಗಾರ ಮತ್ತು ಬೆರಳಚ್ಚು-ನಕಲುಗಾರ ಹುದ್ದೆಗೆ ಪಿಯುಸಿ ಮತ್ತು ಡಿಪ್ಲೊಮಾ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಸೇವಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು.

Apply For Various Post At Chikkamagaluru District Court

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಚಿಕ್ಕಮಗಳೂರು ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ ವಯೋಮಿತಿ 35 ವರ್ಷಗಳು (15 ಸೆಪ್ಟೆಂಬರ್ 2022)ಕ್ಕೆ ಅನ್ವಯವಾಗುವಂತೆ.

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ. ಪ್ರವರ್ಗ2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಪ್ರವರ್ಗ2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 150 ರೂ. ಶುಲ್ಕ ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಶುಲ್ಕವಿದೆ. ಆನ್‌ಲೈನ್ ಅಥವ ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಮೆರಿಟ್ ಲಿಸ್ಟ್, ಟೈಪಿಂಗ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ 21,400-42,000 ರೂ. ವೇತನ ನಿಗದಿ ಮಾಡಲಾಗಿದೆ. ಸೇವಕರ ಹುದ್ದೆಗೆ 17,000-28,950 ರೂ. ವೇತನ ನಿಗದಿಗೊಳಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಕಡ್ಡಾಯವಾಗಿ, ಸರಿಯಾಗಿ ಓದಿಕೊಳ್ಳಬೇಕು. ಚಾಲ್ತಿಯಲ್ಲಿರುವ ಮೊಬೈಲ್ ನಂಬರ್, ಇ-ಮೇಲ್ ಐಡಿಯನ್ನು ನೀಡಬೇಕಿದೆ.

ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ಅಭ್ಯರ್ಥಿಗಳು ಅಗತ್ಯವಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಲ್ಲಿಕೆ ಮಾಡಬೇಕಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಸೆಪ್ಟೆಂಬರ್ 15 ಕೊನೆಯ ದಿನ, ಅರ್ಜಿ ಶುಲ್ಕ ಪಾವತಿ ಮಾಡಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು, ಹೆಚ್ಚಿನ ಮಾಹಿತಿಗಾಗಿ ವಿಳಾಸ

ಜೂನಿಯರ್ ಇಂಜಿನಿಯರಿಂಗ್ ಹುದ್ದೆ; ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್ & ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಯನ್ನು ಮಾಡುತ್ತಿದೆ.

ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪರೀಕ್ಷೆಯು ನವೆಂಬರ್ 2022ರಲ್ಲಿ ನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಹುದ್ದೆಗೆ ಅರ್ಹರು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520/ 9483862020 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಬಹುದಾಗಿದೆ. ದೂರವಾಣಿ ಸಂಖ್ಯೆ 08192-259446.

ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ; ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3 ಬಿ ಗೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಕರೆಯಲಾಗಿದೆ.

ಆಸಕ್ತರು ಸುವಿಧಾ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟಂಬರ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0820-2574882, 080-22374832.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+