ದಾವಣಗೆರೆ; ಬ್ಯಾಂಕಿನಲ್ಲಿ ಕೆಲಸ ಖಾಲಿ ಇದೆ, 48 ಹುದ್ದೆಗೆ ಅರ್ಜಿ ಹಾಕಿ

ದಾವಣಗೆರೆ, ಮೇ 05; ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ದಾವಣಗೆರೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 1/6/2022 ಕೊನೆಯ ದಿನವಾಗಿದೆ.

ಒಟ್ಟು 48 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ, ಅಂಚೆ ಅಥವ ಕೊರಿಯರ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಒಟ್ಟು ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರು ಮಾಡಿ, 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಲಿಖಿತ ಪರೀಕ್ಷೆಯ ಪ್ರಶ್ನೆಗಳು ಬಹು ಆಯ್ಕೆ ಮಾದರಿಯಲ್ಲಿರುತ್ತದೆ ಎಂದು ಆದೇಶ ಹೇಳಿದೆ.

ಸಂದರ್ಶನಕ್ಕೆ ನಿಗದಿಪಡಿಸಿದ ಅಂಕಗಳು 15. ಲಿಖಿತ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳನ್ನು ಶೇ 85ಕ್ಕೆ ಇಳಿಸಿ, ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿಯನ್ನು ತಯಾರು ಮಾಡಿ, ಮೀಸಲಾತಿ ನಿಯಮಗಳನ್ನು ಅನುಸರಿಸಿ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಯಾವ-ಯಾವ ಹುದ್ದೆಗಳು

ಯಾವ-ಯಾವ ಹುದ್ದೆಗಳು

ಕಿರಿಯ ಸಹಾಯಕರು/ ಕಿರಿಯ ಕ್ಷೇತ್ರಾಧಿಕಾರಿಗಳು 29, ಕಂಪ್ಯೂಟರ್ ಇಂಜಿನಿಯರ್ 1, ಕಂಪ್ಯೂಟರ್ ಆಪರೇಟರ್ 1, ವಾಹನ ಚಾಲಕರು 1, ಕಿರಿಯ ಸೇವಕರು (ಅಟೆಂಡರ್) 16 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ವಿಳಾಸ ddccbank.co.in

ಹುದ್ದೆಗಳ ವಿದ್ಯಾರ್ಹತೆಯ ವಿವರಗಳು

ಹುದ್ದೆಗಳ ವಿದ್ಯಾರ್ಹತೆಯ ವಿವರಗಳು

ಕಿರಿಯ ಸಹಾಯಕರು/ ಕಿರಿಯ ಕ್ಷೇತ್ರಾಧಿಕಾರಿಗಳು ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಹಾಗೂ ಸಹಕಾರ ವಿಷಯದಲ್ಲಿ ಅಧ್ಯಯನ, ಜ್ಞಾನ ಮತ್ತು ಅನುಭವ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳಿಗೆ ಕನ್ನಡ, ಇಂಗ್ಲಿಶ್, ಭಾಷಾ ಪರಿಜ್ಞಾನ ಹಾಗೂ ಕಂಪ್ಯೂಟರ್ ನಿರ್ವಹಣೆ ಕುರಿತು ತಿಳುವಳಿಕೆ ಕಡ್ಡಾಯವಾಗಿದೆ.

ಕಂಪ್ಯೂಟರ್ ಇಂಜಿನಿಯರ್/ ಕಂಪ್ಯೂಟರ್ ಆಪರೇಟರ್

ಕಂಪ್ಯೂಟರ್ ಇಂಜಿನಿಯರ್/ ಕಂಪ್ಯೂಟರ್ ಆಪರೇಟರ್

ಕಂಪ್ಯೂಟರ್ ಇಂಜಿನಿಯರ್ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಕಂಪ್ಯೂಟರ್ ಪ್ರೊಗ್ರಾಮರ್, ಬಿಇ, ಸಿಎಸ್, ಇ&ಸಿ ಇಂಜಿನಿಯರಿಂಗ್/ ಎಂಸಿಎ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಕನ್ನಡ, ಇಂಗ್ಲಿಶ್, ಭಾಷಾ ಪರಿಜ್ಞಾನ ಹಾಗೂ ಕಂಪ್ಯೂಟರ್ ನಿರ್ವಹಣೆ ಕುರಿತು ತಿಳುವಳಿಕೆ ಹೊಂದಿರುವುದು ಕಡ್ಡಾಯವಾಗಿದೆ.

ಕಂಪ್ಯೂಟರ್ ಆಪರೇಟರ್ ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು ಅಥವ ಮೂರು ವರ್ಷದ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಇಂಗ್ಲಿಶ್ ಬೆರಳಚ್ಚು ಮಾಡಲು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ ಹಾಜರುಪಡಿಸಬೇಕು/ ಸಲ್ಲಿಸಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರತಕ್ಕದ್ದು.

ವಾಹನ ಚಾಲಕರು, ಕಿರಿಯ ಸೇವಕರು

ವಾಹನ ಚಾಲಕರು, ಕಿರಿಯ ಸೇವಕರು

ವಾಹನ ಚಾಲಕ ಹುದ್ದೆಗೆ ಕನಿಷ್ಠ 10ನೇ ತರಗತಿ/ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು ಹಾಗೂ ಊರ್ಜಿತ ಲಘು ವಾಹನ ಚಾಲನೆಯ ಲೈಸೆನ್ಸ್, ಬ್ಯಾಡ್ಜ್ ಹೊಂದಿರಬೇಕು. ಕನ್ನಡ ಭಾಷೆ ಕಡ್ಡಾಯವಾಗಿ ಕಲಿತಿರಬೇಕು.

ಕಿರಿಯ ಸೇವಕ ಹುದ್ದೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಕನ್ನಡ ಭಾಷೆ ಕಡ್ಡಾಯವಾಗಿ ಕಲಿತಿರತಕ್ಕದ್ದು.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿಗಳನ್ನು ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಅಭ್ಯರ್ಥಿಯು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಈ ಕೆಳಗಿನ ಗರಿಷ್ಠ ವಯೋಮಿತಿ ಹೊಂದಿರಬೇಕು. ಸಾಮಾನ್ಯ ವರ್ಗ 35, ಇತರೆ ಹಿಂದುಳಿದ ವರ್ಗ 38, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಸರ್ಕಾರಿ ಆದೇಶದ ಅನುಸಾರ ಮಾಜಿ ಸೈನಿಕರಿಗೆ ಸೈನ್ಯದಲ್ಲಿ ಸಲ್ಲಿಸಿದ ಸೇವೆಯನ್ನು ಕಳೆದು ಆಯಾ ವರ್ಗಕ್ಕೆ ನಿಗದಿಪಡಿಸಿದ ವಯೋಮಿತಿಯೊಳಗಿರಬೇಕು. ವಿಧವೆಯರಿಗೆ ಮತ್ತು ದೈಹಿಕ ಅಂಗವಿಕಲರಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+