• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೂರದರ್ಶನ ಹಾಗೂ ಆಕಾಶವಾಣಿಯ ಸುದ್ದಿ ವಿಭಾಗದಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಬೆಂಗಳೂರು, ನವೆಂಬರ್ 14; ಬೆಂಗಳೂರು ದೂರದರ್ಶನ ಹಾಗೂ ಆಕಾಶವಾಣಿಯ ಸುದ್ದಿ ವಿಭಾಗದಲ್ಲಿ ಸಲಹಾ ಸಂಪಾದಕರು, ಬಹುಮಾಧ್ಯಮ ಪರ್ತಕರ್ತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹರು ಅರ್ಜಿಗಳನ್ನು ನವೆಂಬರ್ 23ರೊಳಗೆ ಸಲ್ಲಿಸಬೇಕು.

ಗುತ್ತಿಗೆ ಆಧಾರದಲ್ಲಿ ಸಲಹಾ ಸಂಪಾದಕರು, ಬಹುಮಾಧ್ಯಮ ಪರ್ತಕರ್ತರು (multi media journalist) ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಕರೆಯಲಾಗಿದೆ. ಈ ಹುದ್ದೆಗಳು ಸಂಪೂರ್ಣವಾಗಿ ಗುತ್ತಿಗೆ ಆಧಾರವಾಗಿದ್ದು, ಪೂರ್ಣ ಅವಧಿಯಲ್ಲಿ ಕಾರ್ಯ ನಿರ್ವಹಿಸಬೇಕಿದೆ.

KPSC recruitment; ಶೀಘ್ರವೇ 700 ಹುದ್ದೆ ಭರ್ತಿಗೆ ಅಧಿಸೂಚನೆ KPSC recruitment; ಶೀಘ್ರವೇ 700 ಹುದ್ದೆ ಭರ್ತಿಗೆ ಅಧಿಸೂಚನೆ

ಸಲಹಾ ಸಂಪಾದಕರ ಹುದ್ದೆಗೆ ಅರ್ಜಿ ಸಲ್ಲಿಸುವವರು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪದವಿ ಪಡೆದಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿರಬೇಕು. ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಪರಿಣಿತಿ ಹಾಗೂ ಜ್ಞಾನ ಅವಶ್ಯವಾಗಿದೆ.

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ನವೆಂಬರ್ 23ರೊಳಗೆ ಅರ್ಜಿ ಹಾಕಿ ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ನವೆಂಬರ್ 23ರೊಳಗೆ ಅರ್ಜಿ ಹಾಕಿ

ವಯೋಮಿತಿ ಗರಿಷ್ಠ 55 ವರ್ಷದೊಳಗಿರಬೇಕು. ಈ ಹುದ್ದೆಯ ಗುತ್ತಿಗೆ ಅವಧಿ ಎರಡು ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 1,25,000 ರೂ. ನೀಡಲಾಗುತ್ತದೆ.

Government Jobs: ಗದಗ ಡಿಸಿ ಕಚೇರಿಯಲ್ಲಿ 58 ಲೋಡರ್, ಕ್ಲೀನರ್ ಹುದ್ದೆಗೆ ಅರ್ಜಿ ಆಹ್ವಾನ Government Jobs: ಗದಗ ಡಿಸಿ ಕಚೇರಿಯಲ್ಲಿ 58 ಲೋಡರ್, ಕ್ಲೀನರ್ ಹುದ್ದೆಗೆ ಅರ್ಜಿ ಆಹ್ವಾನ

ಬಹು ಮಾಧ್ಯಮ ಪತ್ರಕರ್ತರ ಹುದ್ದೆಗೆ ಅರ್ಜಿ ಹಾಕುವವರು ಬೆಂಗಳೂರು, ರಾಯಚೂರು, ರಾಮನಗರ, ಮೈಸೂರು, ಕಲಬುರಗಿ, ಧಾರವಾಡ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೆಳಗಾವಿಯಲ್ಲಿ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ಪೂರ್ಣ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ.

ಅರ್ಜಿ ಸಲ್ಲಿಸುವವರು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು. ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಪರಿಣಿತಿ ಹಾಗೂ ಜ್ಞಾನದ ಜೊತೆಗೆ ವರದಿಗಾರಿಕೆಯಲ್ಲಿ 3 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ 24 ರಿಂದ 40 ವರ್ಷಗಳು. ಈ ಹುದ್ದೆಯ ಗುತ್ತಿಗೆ ಅವಧಿ 2 ವರ್ಷದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 30,000 ರೂ. ಸಂಭಾವನೆ ನೀಡಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 23 ಕೊನೆಯ ದಿನವಾಗಿದೆ. https://applications.prasarbharati.org ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ https://prasarbharati.gov.in/pbvacancies/ ಭೇಟಿ ನೀಡಿ.

English summary
Apply for various post at Doordash and Akashavani news desk at Bengaluru. Candidates can apply before November 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X