ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧ ಹುದ್ದೆಗೆ ಖಾಲಿ ಇದೆ

|
Google Oneindia Kannada News

ಬೆಂಗಳೂರು, ಜೂನ್ 07; ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಒಟ್ಟು 84 ಹುದ್ದೆಗಳಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 7/7/2021 ಸಂಜೆ 6 ಗಂಟೆ ಕೊನೆಯ ದಿನವಾಗಿದೆ.

ನ್ಯಾಯ ವಿಜ್ಞಾನ ಪ್ರಯೋಗಾಲಯ ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯದ ಘಟಕಗಳಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ವಿವರಗಳು ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ವಿವರಗಳು

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 7/6/2021ರಿಂದ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಖಾತೆ ಹಾಗೂ ಅಂಚೆ ಕಚೇರಿಗಳಲ್ಲಿ ಪಾವತಿಸಲು ಕೊನೆಯ ದಿನಾಂಕ 9/7/2021.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ತಕ್ಷಣ ಅರ್ಜಿ ಹಾಕಿ

 Apply For Various Post At Forensic Science Laboratory

ವಯೋಮಿತಿ; ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 7/7/2021ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 35, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪ.ಜಾ/ ಪ.ಪಂ/ ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಧಾರವಾಡ; ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಹಾಕಿ ಧಾರವಾಡ; ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಹಾಕಿ

ಶುಲ್ಕಗಳು; ಸಾಮಾನ್ಯ ವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಪ್ರತಿ ಹುದ್ದೆಗೆ ಪ್ರತ್ಯೇಕವಾದ ವಿದ್ಯಾರ್ಹತೆ ಇದ್ದು ಅಭ್ಯರ್ಥಿಗಳು ಅಧಿಕೃತವಾದ ವೆಬ್ ಸೈಟ್ www.ksp.gov.in ವೆಬ್ ಸೈಟ್ ನೋಡಬಹುದು. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಸೂಚನೆಗಳನ್ನು ಸರಿಯಾಗಿ ಓದಿಕೊಳ್ಳಬೇಕು ಎಂದು ತಿಳಿಸಲಾಗಿದೆ.

English summary
Karnataka police department invited applications for various post at forensic science laboratory. Candidates can apply online till 7/7/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X