ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ, ಜೂನ್ 09; ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 9ರಿಂದ ಈ ಹುದ್ದೆಗಳು ಭರ್ತಿಯಾಗುವವರೆಗೂ ಕಚೇರಿಗೆ ಹಾಜರಾಗಿ ದಾಖಲೆ, ಅರ್ಜಿ ಸಲ್ಲಿಸಬಹುದಾಗಿದೆ.

ತಜ್ಞ ವೈದ್ಯರು/ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಡಿಎಮ್ಎಫ್ ಅನುದಾನದಡಿ 6 ತಿಂಗಳ ಅವಧಿಗೆ ಮಾತ್ರ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳ ಸಂಖ್ಯೆ 1. ಅರ್ಜಿ ಸಲ್ಲಿಸುವವರು ಎಂ. ಬಿ. ಬಿ. ಎಸ್ ಪದವಿ ಪಡೆದಿರಬೇಕು. ಕರ್ನಾಟಕ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯಾದ ಚಾಲ್ತಿ ಪ್ರಮಾಣ ಪತ್ರ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 45 ಸಾವಿರ ರೂಪಾಯಿಗಳು.

Apply For Various Post At Hospet Primary Health Center

ಸ್ತ್ರೀರೋಗ ತಜ್ಞರು 8 ಹುದ್ದೆ, ಅರವಳಿಕೆ ತಜ್ಞರು 10 ಹುದ್ದೆ, ಮಕ್ಕಳ ತಜ್ಞರು 6 ಹುದ್ದೆ, ಜನರಲ್ ಫಿಜಿಷಿಯನ್ 2ಹುದ್ದೆ, ರೇಡಿಯೊಲಾಜಿಸ್ಟ್ 1 ಹುದ್ದೆ ಭರ್ತಿ ಮಾಡಲಾಗುತ್ತಿದೆ. ಎಲ್ಲಾ ಹುದ್ದೆಗಳಿಗೆ ತಜ್ಞತೆಗೆ ಅನುಗುಣವಾದ ಎಲ್ಲಾ ದಾಖಲಾತಿಗಳು ಅಗತ್ಯ/ ಕರ್ನಾಟಕ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯಾದ ಚಾಲ್ತಿ ಪ್ರಮಾಣ ಪತ್ರ ಹೊಂದಿರಬೇಕು. ಅಭ್ಯರ್ಥಿಗಳಿಗೆ ವೇತನ1 ಲಕ್ಷದ 30ಸಾವಿರ ರೂ. ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳಿಗೆ ಸೂಚನೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 63 ವರ್ಷದೊಳಗೆ ಇರತಕ್ಕದ್ದು. ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸತಕ್ಕದ್ದು. ಸದರಿ ಹುದ್ದೆಗೆ ನೇಮಕಾತಿಗೊಳ್ಳುವ ತಜ್ಞ ವೈದ್ಯರು ಆರೋಗ್ಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲು ಅರ್ಹರಿರಬೇಕು.

ಒಂದು ದಿನಕ್ಕೆ ಆ ಹುದ್ದೆಗೆ ಒಂದಕ್ಕಿಂತ ಹೆಚ್ಚಾಗಿ ಅರ್ಜಿಗಳು ಬಂದಲ್ಲಿ ಅಂತಹ ಅರ್ಜಿಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಒಂದು ವರ್ಷ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ 5 ಕೃಪಾಂಕ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19ನಲ್ಲಿ ಸೇವೆ ಸಲ್ಲಿಸಿದವರಿಗೆ ಒಂದು ವರ್ಷಕ್ಕೆ 10 ಕೃಪಾಂಕ ನೀಡಿ ಮೆರಿಟ್ ಅಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ತಜ್ಞತೆಯ ವಿದ್ಯಾರ್ಹತೆಯ ಅನುಗುಣವಾಗಿ ಮೂಲ ದಾಖಲಾತಿ ಸಮೇತ ಒಂದು ನಕಲು ಪ್ರತಿಯ ಜೊತೆಗೆ ಜಿಲ್ಲಾಧಿಕಾರಿಗಳ ಕಚೇರಿ ಹೊಸಪೇಟೆ ವಿಜಯನಗರ ಜಿಲ್ಲೆ ಇಲ್ಲಿಗೆ ಜೂನ್ 9 ರಿಂದ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳು ಭರ್ತಿಯಾಗುವವರೆಗೂ ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಹಾಜರಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ; ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಈ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 18 ಆಗಿರುತ್ತದೆ. ಒಂದು ಹುದ್ದೆ ಇದ್ದು, ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ಗೌರವಧನ 8 ಸಾವಿರ ರೂ.ಗಳು. ಸಾರಿಗೆ ಭತ್ಯೆ 2 ಸಾವಿರ ರೂ. (ಅಗತ್ಯತೆಗೆ ತಕ್ಕಂತೆ ಗರಿಷ್ಟ).

ಕುರುಗೋಡು ಪುರಸಭೆ ವ್ಯಾಪ್ತಿಯ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ. ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ಆಸಕ್ತಿಯುಳ್ಳ ಅರ್ಜಿದಾರರು ಪುರಸಭೆ ಕಚೇರಿ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿಯನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸುವವರಿಗೆ ವಯೋಮಿತಿ 18 ರಿಂದ 45 ವರ್ಷಗಳು. ಅಭ್ಯರ್ಥಿ ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣಗೊಂಡಿರಬೇಕು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುತ್ತದೆ. ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರತಕ್ಕದ್ದು).

ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು, ಕನಿಷ್ಠ 3 ವರ್ಷಗಳಿಂದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯೆಯಾಗಿರಬೇಕು. ಆಂತರಿಕ ಸಾಲ ಪಡೆದು ಕಟ್ಟು ಬಾಕಿದಾರರಾಗಿರಬಾರದು, ಸರ್ಕಾರಿ/ ಅರೇ ಸರ್ಕಾರಿ/ ಎನ್.ಜಿ.ಓ. ಗಳಲ್ಲಿ ಉದ್ಯೋಗಸ್ಥರಾಗಿರಬಾರದು.

ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕೆಲಸದ ನಿಮಿತ್ತ ಅಗತ್ಯವಿದ್ದಲ್ಲಿ ಬೇರೆ ಬೇರೆ ಸ್ಥಳ, ಜಿಲ್ಲೆ ಮತ್ತು ಹೊರ ರಾಜ್ಯಗಳಲ್ಲಿ ನೀಡುವ ತರಬೇತಿ ಅಥವಾ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಿದ್ದರಿರಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿ ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08393-263166.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+