ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಡಿ.31ರೊಳಗೆ ಅರ್ಜಿ ಹಾಕಿ

ಕಲಬುರಗಿ, ಡಿಸೆಂಬರ್ 3; ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ 200 ರೂ. ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಶೀಘ್ರಪಿಲಿಗಾರ (ಹಿಂಬಾಕಿ) 8 ಹುದ್ದೆ, ಬೆರಳಚ್ಚುಗಾರ 1, ಬೆರಳಚ್ಚು ನಕಲುಗಾರ 1, ಆದೇಶ ಜಾರಿಕಾರ 2 ಮತ್ತು ಜವಾನ 51 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಕೊನೆಯ ದಿನಾಂಕದೊಳಗಾಗಿ ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷ. ಪ್ರವರ್ಗ-2(ಎ)/ 2(ಬಿ)/ 3(ಎ)/ 3(ಬಿ) ವರ್ಗದವರಿಗೆ ಗರಿಷ್ಠ ವಯೋಮಿತಿ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ವರ್ಗದ ಅಭ್ಯರ್ಥಿಗಳಿಗೆ 40 ವರ್ಷ.

Apply For Various Post At Kalaburagi District Court

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ 200 ರೂ. ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಎಸ್‌ಬಿಐ ಬ್ಯಾಂಕಿನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಲು ಜನವರಿ 2, 2021 ಕೊನೆಯ ದಿನವಾಗಿದೆ.

ಅರ್ಜಿಗಳನ್ನು ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್‍ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಸಹ ವೆಬ್ ಸೈಟ್‌ನಲ್ಲಿ ಲಭ್ಯವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+