ಕೆನರಾ ಡಿಸಿಸಿ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ, 41 ಹುದ್ದೆಗಳು
ಬೆಂಗಳೂರು, ಅಕ್ಟೋಬರ್ 14; ಕೆನರಾ ಡಿಸ್ಟ್ರಿಕ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. (ಕೆಡಿಸಿಸಿ)ಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 27 ಅಕ್ಟೋಬರ್ 2022 ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕವಾಗಿದೆ.
ಜ್ಯೂನಿಯರ್ ಕ್ಲರ್ಕ್, ಜ್ಯೂನಿಯರ್ ಸೂಪರ್ ವೈಸರ್ ಸೇರಿ 41 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡದಲ್ಲಿ ಕೆಲಸ ಮಾಡಬೇಕಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 27,650 ರಿಂದ 52,650 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಬೇಕಾದ ಅಭ್ಯರ್ಥಿಗಳು ಕೆಡಿಸಿಸಿ ನೇಮಕಾತಿ ನಿಯಮಗಳ ಅನ್ವಯ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ, ಇಂಗ್ಲಿಷ್ ಭಾಷೆಯನ್ನು ಬರೆಯಲು, ಮಾತನಾಡಲು, ಅರ್ಥ ಮಾಡಿಕೊಳ್ಳಲು ಬರಬೇಕು.
ಕೆನರಾ ಡಿಸ್ಟ್ರಿಕ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. (ಕೆಡಿಸಿಸಿ) ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 35 ವರ್ಷಗಳು. 27 ಅಕ್ಟೋಬರ್ 2022ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ ಎಸ್‌ಟಿ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು 250 ರೂ. ಶುಲ್ಕ ಮತ್ತು 45 ರೂ. ಜಿಎಸ್‌ಟಿ ಪಾವತಿಸಬೇಕು. ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು ರೂ. 500 ಮತ್ತು ಜಿಎಸ್‌ಟಿ 90 ರೂ. ಪಾವತಿಸಬೇಕು.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಸ್ಪೀಡ್ ಅಥವ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಮಾಡಲು ವಿಳಾಸ; Managing Director, Kanara DCC Bank Ltd., Head Office, New Market, Sirsi - 581402, Uttara Kannada, Karnataka.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications