ಧಾರವಾಡ ವಿವಿಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ
ಬೆಂಗಳೂರು, ಜನವರಿ 04: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 15 ಜನವರಿ 2021 ಕೊನೆಯ ದಿನ.
ರಿಸರ್ಚ್ ಅಸಿಸ್ಟೆಂಟ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ಮೂರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದವರು ಧಾರವಾಡದಲ್ಲಿ ಕೆಲಸ ಮಾಡಬೇಕು.
ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವವರು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಎ/ಬಿ.ಕಾಂ ಪದವಿಯನ್ನು ಪಡೆದಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 12,000 ರೂ., ಮತ್ತು ಆಫೀಸ್ ಅಸಿಸ್ಟೆಂಟ್ ಅಭ್ಯರ್ಥಿಗಳಿಗೆ 9,300 ರೂ. ವೇತನವನ್ನು ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸ್ಪೀಡ್ ಅಥವ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ವಿಳಾಸ: Dr. S.C. Natikar, Principal Investigator, Department of Sociology, Karnatak University, Dharwad - 580003
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications