ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ನವೆಂಬರ್ 09; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಐಎ) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 14/11/2022ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.

Apply For Various Post At Karnataka Examinations Authority

ಟೆಕ್ನಿಕಲ್ ಹೆಡ್ ಕಂಪ್ಯೂಟರ್ ಸೆಕ್ಷನ್ 1, ಸೀನಿಯರ್ ಪ್ರೋಗ್ರಾಮರ್ 3, ಪ್ರೋಗ್ರಾಮರ್ 8, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ 2, ಡೇಟಾ ಅನಲಿಸ್ಟ್ 4, ಟ್ರೈನಿ/ ಅಪ್ರೆಂಟಿಸ್ 3 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹಿಂದಿನ ಪ್ರಕಟಣೆಗಳ ಅನುಸಾರ ಇ-ಮೇಲ್ ಅಥವ ಖುದ್ದಾಗಿ ರೆಸ್ಯೂಮ್‌ಗಳನ್ನು ಕಳುಹಿಸಿರುವ/ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ [email protected].

ಧಾರವಾಡದಲ್ಲಿ ನೇರ ಸಂದರ್ಶನ; ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಆತ್ಮ ಯೋಜನೆಯಡಿ ಕೃಷಿ ವಿಶ್ವವಿದ್ಯಾಲಯ (ಕೃಷಿ ಮಾರುಕಟ್ಟೆ) ಉಪನಿರ್ದೇಶಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ತಾತ್ಕಾಲಿಕ ಈ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಕೃಷಿ ಮಾರುಕಟ್ಟೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನವೆಂಬರ್ 22 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ವಿಳಾಸ; ವಿಸ್ತರಣಾ ನಿರ್ದೇಶನಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ www.uasd.edu ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+