ಜಲ ಜೀವನ ಮಿಷನ್; ಕರ್ನಾಟಕದಲ್ಲಿ ವಿವಿಧ ಹುದ್ದೆಗಳ ಭರ್ತಿ

ಬೆಂಗಳೂರು, ಆಗಸ್ಟ್ 05; ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 16/8/2021 ಕೊನೆಯ ದಿನವಾಗಿದೆ.

ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಲ್ಲಿಕೆ ಮಾಡಬಹುದು.

Junior consultant executive (1) ಹುದ್ದೆ ಇದ್ದು, 60 ಸಾವಿರ ರೂ. ವೇತನ, ಪ್ರತಿ ತಿಂಗಳು 15 ಸಾವಿರ ರೂ. ಪ್ರಯಾಣ ಭತ್ಯೆ ನೀಡಲಾಗುತ್ತದೆ. ಮೇಲ್ವಿಚಾರಣೆ ಹಾಗೂ ಮೌಲ್ಯ ಮಾಪನ ತಜ್ಞರ (1) ಹುದ್ದೆ ಇದ್ದು, 50 ರಿಂದ 60 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

Apply For Various Post At Karnataka Rural Development And Panchayat Raj Dept

ಜಿಲ್ಲಾ ಪಂಚಾಯಿತಿ ಕಚೇರಿ; ಜಿಲ್ಲಾ ಯೋಜನಾ ವ್ಯವಸ್ಥಾಪಕರು (2) ಹುದ್ದೆ ಭರ್ತಿ ಮಾಡಲಾಗುತ್ತಿದೆ. 35 ರಿಂದ 45 ಸಾವಿರ ರೂ. ವೇತನ ನೀಡಲಾಗುತ್ತದೆ. ಜಿಲ್ಲಾ ಸಮಾಲೋಚಕ (3) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವೇತನ 25 ರಿಂದ 35 ಸಾವಿರ ರೂ.ಗಳು.

ನೈರ್ಮಲ್ಯ ಮತ್ತು ಶುಚಿತ್ವ ಸಮಾಲೋಚಕರು (2) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 25 ರಿಂದ 30 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಾಲೋಚಕರು (3) ಹುದ್ದೆಗಳಿದ್ದು, 25 ರಿಂದ 30 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ
ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರಿಸಲಾಗುವುದು.

ಒಂದೊಮ್ಮೆ ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟಿಸ್ ನೀಡಿ ರದ್ದುಪಡಿಸಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?; ಆಸಕ್ತ ಅಭ್ಯರ್ಥಿಗಳು https://rdpr.karnataka.gov.in/ ಅಥವ https://swachhamevajayate.org ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅರ್ಜಿಯಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಿ ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ; ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು 5600-009. 16/8/2021ರ ಸಂಜೆ 5.30ರೊಳಗೆ ಅರ್ಜಿ ತಲುಪಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕ/ ಸ್ನಾತಕೋತ್ತರ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ. ಅಂತಹ ಅರ್ಜಿಗಳು ಬಂದರೆ ತಿರಸ್ಕರಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಯು ಇಲಾಖೆಯ ಅಥವಾ ಹೊರಗುತ್ತಿಗೆ ಸಂಸ್ಥೆಯೊಂದಿಗೆ ನಿಗದಿತ ನಮೂನೆಯಲ್ಲಿ ಕರಾರು ಒಪ್ಪಂದವನ್ನು ಮಾಡಿಕೊಳ್ಳಬೇಕು ಹಾಗೂ ಕಾರ್ಯಾನುಭವದ ಆಧಾರದ ಮೇಲೆ ಮಾಸಿಕ ಸಮಾಲೋಚನಾ ಶುಲ್ಕ ನಿಗದಿಪಡಿಸಲಾಗುವುದು. ಕರಾರು ಒಪ್ಪಂದ ಮಾಡಿಕೊಂಡ ಅಭ್ಯರ್ಥಿಗೆ ಇಲಾಖೆಯಲ್ಲಿನ ಯಾವುದೇ ಹುದ್ದೆಗಳಲ್ಲಿ ವಿಲೀನಗೊಳ್ಳಲು/ ಮುಂದುವರೆಯಲು ಯಾವುದೇ ಹಕ್ಕು ಇರುವುದಿಲ್ಲ.

ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಹಾಗೂ ಆಯಾ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.

ನೇಮಕಾತಿಯನ್ನು ಪೂರ್ಣವಾಗಿ ಮತ್ತು ಭಾಗಶಃ ರದ್ದು ಮಾಡುವ/ ಮುಂದೂಡುವ/ ಬದಲಾವಣೆ ಮಾಡುವ ಹಕ್ಕನ್ನು ಇಲಾಖೆಯು ಹೊಂದಿರುತ್ತದೆ. ಜಿಲ್ಲಾ ಪಂಚಾಯಿತಿಯ ಹುದ್ದೆಗಳು ಜಿಲ್ಲಾಮಟ್ಟದ ಹುದ್ದೆಯಾಗಿರುವುದರಿಂದ ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+