ಬಳ್ಳಾರಿ ಹಾಲು ಉತ್ಪಾದಕರ ಸಂಘದಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಅಕ್ಟೋಬರ್ 18 : ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಬಳ್ಳಾರಿಯಲ್ಲಿ ಖಾಲಿ ಇರುವ ವಿವಿಧ ವೃಂದಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 29 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ8/11/2019. ಅರ್ಜಿ ಶುಲ್ಕ ಪಾವತಿ ಮಾಡಲು 8/11/2019 ಸಂಜೆ 6 ಗಂಟೆ ಕೊನೆ ದಿನವಾಗಿದೆ.

ಸಾರ್ವಜನಿಕ ಸಂಪರ್ಕ ಅಧಿಕಾರಿ, ಡೇರಿ ಮೇಲ್ವಿಚಾರಕರು, ಆಡಳಿತ ಸಹಾಯಕ ದರ್ಜೆ, ಲೆಕ್ಕ ಸಹಾಯಕ ದರ್ಜೆ, ಕಿರಿಯ ತಾಂತ್ರಿಕರು, ಕೆಮಿಸ್ಟ್ ದರ್ಜೆ - 2, ಮಾರುಕಟ್ಟೆ ಸಹಾಯಕರು ದರ್ಜೆ -2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Apply For Various Post AT KMF RBKMUL

ವಯೋಮಿತಿ ವಿವರ : ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 8/11/2019ರಂದು ಕನಿಷ್ಠ/ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ. ಕನಿಷ್ಠ ವಯೋಮಿತಿ 18 ವರ್ಷಗಳು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1 40 ವರ್ಷಗಳು, ಪ್ರವರ್ಗ 2ಎ, 3ಬಿ, 3ಎ, 3ಬಿ 38 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷಗಳು.

ಮಾಜಿ ಸೈನಿಕರಿಗೆ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ ಅವಧಿಗೆ ಹಾಗೂ ಅಂಗವಿಕಲರು ಮತ್ತು ವಿಧವೆಯರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕಗಳು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲರು, ಮಾಜಿ ಸೈನಿಕರು ಹಾಗೂ ಪ್ರವರ್ಗ -1ರ ಅಭ್ಯರ್ಥಿಗಳಿಗೆ 400 ರೂ. ಶುಲ್ಕ, ಬ್ಯಾಂಕ್ ವೆಚ್ಚ ಪ್ರತ್ಯೇಕ. ಇತರೆ ವರ್ಗದವರಿಗೆ 800 ರೂ. ಶುಲ್ಕ, ಬ್ಯಾಂಕ್ ವೆಚ್ಚ ಪ್ರತ್ಯೇಕ.

ಒಕ್ಕೂಟವು ನೇಮಕಾತಿ ಅಧಿಸೂಚನೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ, ವೇತನ ಮುಂತಾದ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಗ್ಗೆ ಅಲ್ಲಿ ಮಾಹಿತಿ ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+